ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡಿಗ ಬಲಿ: ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ಪ್ರಯಾಣ- ಸಿದ್ದರಾಮಯ್ಯ

ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಬಲಿಯಾಗಿದ್ದು, ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ಕೂಡ ನೀಡಿರುವುದಾಗಿ ತಿಳಿಸಿದ್ದಾರೆ.

ಇಡೀ ಘಟನೆಯ ಮೇಲೆ ನಾವು ತೀವ್ರ ನಿಗಾ ವಹಿಸಿದ್ದು, ದಾಳಿಯ ಸಂತ್ರಸ್ತರಾಗಿರುವ ನಮ್ಮವರ ನೆರವಿಗೆ ನಿಂತಿದ್ದೇವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಯನ್ನು ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

CM Siddaramaiah
ಪ್ರವಾಸಿಗರ ಮೇಲೆ ಉಗ್ರರ ಕ್ರೌರ್ಯ: ಯಾವ ಧರ್ಮ ಅಂತ ಕೇಳಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಬಲಿ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com