ಸಂತೋಷ್ ಲಾಡ್
ರಾಜ್ಯ
ಸಿಎಂ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್: ಮೂವರು ಕನ್ನಡಿಗರ ಮೃತದೇಹ ತರಲು ಸಹಾಯ
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.
ಬೆಂಗಳೂರು: ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ತುರ್ತು ಕ್ರಮಕ್ಕೆ ನೆರವಾಗಲು ಸಚಿವ ಸಂತೋಷ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಲು ಸೂಚನೆ ನೀಡಿದ ಮೇರೆಗೆ ಸಚಿವರು ಇಂದು ವಿಶೇಷ ವಿಮಾನದಲ್ಲಿ ಶ್ರೀನಗರಕ್ಕೆ ಆಗಮಿಸಿದ್ದಾರೆ.
ಅಲ್ಲಿ ಸಿಲುಕಿದ್ದ ಕನ್ನಡ ಪ್ರವಾಸಿಗರಿಗೆ ಸಹಾಯ ಮಾಡಲು ಮತ್ತು ಭಯೋತ್ಪಾದಕರಿಂದ ಮೃತಪಟ್ಟವರ ಶವಗಳನ್ನು ಮರಳಿ ತರಲು ಸಹಾಯ ಮಾಡಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಅವರ ಸೂಚನೆ ಮೇರೆಗೆ ಐಪಿಎಸ್ ಅಧಿಕಾರಿ ಚೇತನ್ ಆರ್ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತೆರಳಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

