
ಮಂಗಳೂರು: ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ "ಲೈಂಗಿಕ ಕಿರುಕುಳ" ನೀಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್‌ಆರ್‌ಟಿಸಿ)ದಲ್ಲಿ ಗುತ್ತಿಗೆ ಆಧಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಂಡಕ್ಟರ್ ನನ್ನು ಗುರುವಾರ ಬಂಧಿಸಲಾಗಿದೆ.
ಮಹಿಳೆಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪೊಲೀಸರು ವಶಕ್ಕೆ ಪಡೆದಿರುವ ಆರೋಪಿಯನ್ನು ಬಾಗಲಕೋಟೆಯ ಪ್ರದೀಪ್ ಕಾಶಪ್ಪ ನಾಯ್ಕರ್(35) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ನಾಯ್ಕರ್ ನಿದ್ರಿಸುತ್ತಿರುವಾಗ ಮಹಿಳಾ ಪ್ರಯಾಣಿಕರೊಂದಿಗೆ "ಅನುಚಿತವಾಗಿ ವರ್ತಿಸುತ್ತಿರುವುದು" ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ.
ಮತ್ತೊಬ್ಬ ಪ್ರಯಾಣಿಕ ಚಿತ್ರೀಕರಿಸಿದ ವಿಡಿಯೋ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ತೀವ್ರ ಟೀಕಿಗೆ ಗುರಿಯಾಯಿತು ಮತ್ತು ತ್ವರಿತ ಪೊಲೀಸ್ ಕ್ರಮಕ್ಕೆ ಕಾರಣವಾಯಿತು.
ಪ್ರಾಥಮಿಕ ವಿಚಾರಣೆಯ ನಂತರ, ಪೊಲೀಸರು ನಾಯ್ಕರ್ ಅವರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ನಾಯ್ಕರ್ ಅವರು ಗುತ್ತಿಗೆ ಆಧಾರದ ನೌಕರನಾಗಿರುವ ಬಗ್ಗೆ ಕೆಎಸ್‌ಆರ್‌ಟಿಸಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
Advertisement