ಟೌನ್ ಶಿಪ್ ಪಿತಾಮಹ ದೇವೇಗೌಡ-ಕುಮಾರಸ್ವಾಮಿ; ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡುವುದು ಖಚಿತ: ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅಧಿಕಾರಾವಧಿಯಲ್ಲೇ 7 ಟೌನ್ ಶಿಪ್ ಮಾಡಬೇಕು ಎಂದು ತೀರ್ಮಾನವಾಗಿತ್ತು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು.
ದೇವೇಗೌಡ-ಡಿಕೆ.ಶಿವಕುಮಾರ್
ದೇವೇಗೌಡ-ಡಿಕೆ.ಶಿವಕುಮಾರ್
Updated on

ಮೈಸೂರು: ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡುವುದು ಖಚಿತ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್.ಡಿ.ದೇವೇಗೌಡ ಅವರು ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿ ಅಧಿಕಾರಾವಧಿಯಲ್ಲೇ 7 ಟೌನ್ ಶಿಪ್ ಮಾಡಬೇಕು ಎಂದು ತೀರ್ಮಾನವಾಗಿತ್ತು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗುವುದಿಲ್ಲ ಎಂದು ಹೇಳಿದರು.

ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ದರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡಿಯೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತೆ ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು.

ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡ ಅವರಿಗೆ ತಿರುಗೇಟು ನೀಡಿದರು.

ದೇವೇಗೌಡ-ಡಿಕೆ.ಶಿವಕುಮಾರ್
ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಭೂಮಿ ಸ್ವಾಧೀನಕ್ಕೆ ಮಾಜಿ ಪ್ರಧಾನಿ ದೇವೇಗೌಡ ವಿರೋಧ

ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾ ಮಗಳಲ್ಲಿನ ಹಲವಾರು ಸರ್ವೆ ನಂಬರುಗಳಲ್ಲಿರುವ ಸುಮಾರು 10 ಸಾವಿರ ಎಕರೆ ಜಮೀನನ್ನು ಸರಕಾರ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್‌ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವ ಹಿನ್ನೆಲೆಯಲ್ಲಿ ದೇವೇಗೌಡರು ಈ ಪತ್ರ ಬರೆದಿದ್ದಾರೆ.

ರಾಮನಗರ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಕೈಗಾರಿಕಾಭಿವೃದ್ಧಿಗೆ ಸರಕಾರ ಈಗಾಗಲೇ ಸಾವಿರಾರು ಎಕರೆ ರೈತರ ಭೂಮಿಯನ್ನು ವಶಪಡಿಸಿಕೊಂಡಿದ್ದು, ಬೆಂಗಳೂರಿಗೆ ಹೊಂದಿಕೊಂಡಿರುವ ಕಾರಣಕ್ಕೆ ಈ ಭಾಗದಲ್ಲಿ ಹಲವಾರು ಖಾಸಗಿ ಉದ್ದಿಮೆಗಳು ಸ್ಥಾಪನೆಯಾಗಿವೆ. ಜತೆಗೆ, ಕರ್ನಾಟಕ ಗೃಹ ಮಂಡಳಿ ಮತ್ತಿತರ ಸರಕಾರಿ ಪ್ರಾಧಿಕಾರಗಳು ಬಿಡದಿ ಸುತ್ತಮುತ್ತ ಹಲವು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನು ಸ್ವಾಧೀನ ಮಾಡಿಕೊಂಡಿವೆ. ಇಂತಹ ಸ್ಥಿತಿಯಲ್ಲಿಮತ್ತಷ್ಟು ಟೌನ್‌ಶಿಪ್‌ ಯೋಜನೆಗಾಗಿ ಕೃಷಿ ಸಾಗುವಳಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ತಿಳಿಸಿದರು.

ದೇವೇಗೌಡ-ಡಿಕೆ.ಶಿವಕುಮಾರ್
'ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ'ಕ್ಕೆ ರಾಜ್ಯಪಾಲರ ಒಪ್ಪಿಗೆ: ಬಿಬಿಎಂಪಿ ಚುನಾವಣೆ ಮತ್ತಷ್ಟು ವಿಳಂಬ?

ಕಾವೇರಿ ಆರತಿ ಕುರಿತು ಮಾತನಾಡಿ, ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡ್ಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದರು.

ದಸರಾ ಆಚರಣೆ ಕುರಿತು ಮಾತನಾಡಿದ ಅವರು, ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ. ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗತ್ತೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com