ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: 25 ಪ್ರಯಾಣಿಕರು ಪಾರು

ಬೆಂಗಳೂರು-ಮಂಗಳೂರು ಹೈವೆಯಲ್ಲಿ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್​ನಲ್ಲಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
Private bus got fire
ಹೊತ್ತಿ ಉರಿದ ಖಾಸಗಿ ಬಸ್
Updated on

ಮಂಡ್ಯ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಖಾಸಗಿ ಟ್ರಾವೆಲ್ಸ್ ಬಸ್ ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.

ಬೆಂಗಳೂರು-ಮಂಗಳೂರು ಹೈವೆಯಲ್ಲಿ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್​ನಲ್ಲಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Private bus got fire
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ವರ್ಕ್ ಶಾಪ್ ನಲ್ಲಿ ಬೆಂಕಿ; ಹೊತ್ತಿ ಉರಿದ ಖಾಸಗಿ ಬಸ್​ಗಳು! ವಿಡಿಯೋ

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಬಸ್​ನಿಂದ ಕೆಳಗಿಳಿಸಿ ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ಲಿಸುತ್ತಿದ್ದಂತೆ ಸ್ಥಳದಲ್ಲೇ ಬಸ್ ಹೊತ್ತಿ ಉರಿದು ಭಸ್ಮವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com