ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ಪ್ರಜೆ ಬಂಧನ

ಭದ್ರತಾ ಸಿಬ್ಬಂದಿ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
IndiGo flight
ಇಂಡಿಗೋ ವಿಮಾನ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ವಿದೇಶಿ ಪ್ರಜೆಯೊಬ್ಬ ಹೇಳಿಕೊಂಡ ನಂತರ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತವಾರಣ ನಿರ್ಮಾಣವಾಗಿತ್ತು.

ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಈ ಸಂಬಂಧ ಕೆನಡಾದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಬೆದರಿಕೆ ನಂತರ, ಸಂಪೂರ್ಣ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಬೇಗೆ ಸ್ಥಳಾಂತರಿಸಲಾಯಿತು. ಆದರೆ ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ.

IndiGo flight
ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಪ್ರಯಾಣಿಕನ ಬಂಧನ

ಕೆನಡಾ ಪ್ರಯಾಣಿಕನ ಹೇಳಿಕೆಯ ನಂತರ ಇಂಡಿಗೋ ಸಿಬ್ಬಂದಿ ತಕ್ಷಣವೇ ಬೆದರಿಕೆಯ ಬಗ್ಗೆ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ಮಾಹಿತಿ ನೀಡಿದರು ಎಂದು ಗುಪ್ತಾ ಹೇಳಿದರು.

ಭದ್ರತಾ ನಿಯಮಾವಳಿಗಳ ಪ್ರಕಾರ ವಿಮಾನವನ್ನು ಪರಿಶೀಲಿಸಲಾಗಿತ್ತು. ಭದ್ರತಾ ಏಜೆನ್ಸಿಗಳಿಂದ ಅನುಮತಿ ಪಡೆದ ನಂತರ, ವಿಮಾನ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ತೆರಳಿತು. ಈ ವಿಚಾರದಲ್ಲಿ ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com