40 ಡಿಗ್ರಿ ಬಿಸಿಲಿನಲ್ಲೂ ಸೇಬು ಬೆಳೆದು ಬಾಗಲಕೋಟೆ ರೈತ ಸಾಧನೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಪ್ರಶಂಸೆ

ಶ್ರೀಶೈಲ ತೇಲಿ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದವರು.
ಬಾಗಲಕೋಟೆ ರೈತ ಶ್ರೀಶೈಲ ತೇಲಿ
ಬಾಗಲಕೋಟೆ ರೈತ ಶ್ರೀಶೈಲ ತೇಲಿ
Updated on

ಬಾಗಲಕೋಟೆ: ಶೀತ ವಾತಾವರಣವಿರುವ ಕಾಶ್ಮೀರ ಹಾಗೂ ಹಿಮಾಚಲಪ್ರದೇಶದಲ್ಲಿ ಬೆಳೆಯಲಾಗುವ ಸೇಬನ್ನು ಬಿಸಿಲನಾಡು ಬಾಗಲಕೋಟೆಯಲ್ಲಿ ಬೆಳೆದು ಸಾಧನೆ ಮಾಡಿದ ರೈತನ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಮನ್ ಕಿ ಬಾತ್ ನಲ್ಲಿ ಮೋದಿಯವರು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ರೈತ ಶ್ರೀಶೈಲ ತೇಲಿ ಅವರ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಶ್ರೀಶೈಲ ತೇಲಿ ಅವರು ಸೇಬು ಬೆಳೆದ ರೀತಿ ಹಾಗೂ ಪರಿಶ್ರಮವನ್ನು ಕೊಂಡಾಡಿ ಮೋದಿ ಅವರು, ಮೊದಲೆಲ್ಲ ಶೀತವಲಯದಲ್ಲಿ ಸೇಬು ಬೆಳೆಯಲಾಗುತ್ತಿತ್ತು. ಆದರೆ, ಕರ್ನಾಟಕದ ಉಷ್ಣವಲಯದಲ್ಲೂ ಸೇಬು ಬೆಳೆದಿದ್ದು ಗಮನಾರ್ಹವಾಗಿದೆ. 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಪ್ರದೇಶದಲ್ಲಿ ಸೇಬು ಬೆಳೆದು ಲಾಭ ಪಡೆದ ರೈತನ ಯಶೋಗಾಥೆ ಮಾದರಿ ಎಂದು ಹೇಳಿದರು.

ಶ್ರೀಶೈಲ ತೇಲಿ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದವರು. ಕೆಲ ವರ್ಷ ಗಳ ಹಿಂದೆ ಕುಳಲಿ ಗ್ರಾಮದ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಸೇಬು ಕೃಷಿ ಮಾಡಿ ಭರ್ಜರಿ ಫಸಲು ತೆಗೆದಿದ್ದಾರೆ. 7 ಎಕರೆ ಜಮೀನಿನಲ್ಲಿ 2620 ಸಸಿ ನಾಟಿ ಮಾಡಿದ್ದು, ಸಸಿಗಳ ಆರೈಕೆಗೆ ಜೀವಾಮೃತ, ಸಾವಯವ ಗೊಬ್ಬರ ಬಳಕೆ ಮಾಡಿದ್ದಾರೆ.

ಬಾಗಲಕೋಟೆ ರೈತ ಶ್ರೀಶೈಲ ತೇಲಿ
ಕಾಶ್ಮೀರದಿಂದ ಕುಲಾಲಿಗೆ: ಉತ್ತರ ಕರ್ನಾಟಕ ಸುಡು ಬಿಸಿಲಿನಲ್ಲಿ ಸೇಬು ಬೆಳೆದು ಯಶಸ್ವಿಯಾದ ರೈತ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com