ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲ- ಪೊಲೀಸರ ಮಾಹಿತಿ

ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ 27 ರೊಳಗೆ ವಾಪಸ್ ತೆರಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
Representational image
ಸಾಂದರ್ಭಿಕ ಚಿತ್ರ
Updated on

ದಾವಣಗೆರೆ: ಪಾಕಿಸ್ತಾನದ ಮಹಿಳೆಯೊಬ್ಬರು ದೀರ್ಘಾವಧಿಯ ಶೈಕ್ಷಣಿಕ ವೀಸಾದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ, ಹೀಗಾಗಿ ಅವರು ಭಾರತ ತೊರೆಯುವ ಅಗತ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ 27 ರೊಳಗೆ ವಾಪಸ್ ತೆರಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರ ದೇಶಕ್ಕೆ ಕಳುಹಿಸಲಾಗುತ್ತಿದೆ. ಆದಾಗ್ಯೂ, ದೀರ್ಘಾವಧಿಯ ವೀಸಾ (LTV) ಹೊಂದಿರುವವರಿಗೆ ವಿನಾಯಿತಿ ನೀಡಲಾಗುತ್ತಿದೆ.

ನಾವು ಗೃಹ ಸಚಿವಾಲಯ ಮತ್ತು ಸರ್ಕಾರದಿಂದ ಸುತ್ತೋಲೆ ಸ್ವೀಕರಿಸಿದ್ದೇವೆ. ಪಾಕಿಸ್ತಾನಿ ಮಹಿಳೆಯೊಬ್ಬರು ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದಿಂದ ನೀಡಲಾದ ದೀರ್ಘಾವಧಿಯ ವೀಸಾದಲ್ಲಿ ಇಲ್ಲಿಯೇ ಇದ್ದಾರೆ. ಇದರ ಮಾನ್ಯತೆಯು ಆಗಸ್ಟ್ 2025 ರವರೆಗೆ ಇರುತ್ತದೆ; ಆದ್ದರಿಂದ, ಅವರ ವಿರುದ್ಧ ಯಾವುದೇ ಕ್ರಮದ ಅಗತ್ಯವಿಲ್ಲ ಎಂದು ಎಸ್ಪಿ ಹೇಳಿದರು.

ಸುತ್ತೋಲೆಯ ಪ್ರಕಾರ, "ರಾಜತಾಂತ್ರಿಕ ಮತ್ತು ಅಧಿಕೃತ ವೀಸಾಗಳು ಮಾನ್ಯವಾಗಿರುತ್ತವೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾರತದಿಂದ ನಿರ್ಗಮಿಸಲು ಯಾವುದೇ ಗಡುವನ್ನು ನಿರ್ಧರಿಸುತ್ತದೆ. ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ದೀರ್ಘಾವಧಿಯ ವೀಸಾಗಳು ಸಹ ಮಾನ್ಯವಾಗಿರುತ್ತವೆ. ಹೊಸ ರಾಜತಾಂತ್ರಿಕ ಮತ್ತು ಅಧಿಕೃತ ವೀಸಾಗಳು ಅಥವಾ ದೀರ್ಘಾವಧಿಯ ವೀಸಾಗಳ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಹೇಳಲಾಗಿದೆ.

Representational image
ಕಳೆದೆರಡು ದಿನಗಳಲ್ಲಿ ಅಟ್ಟಾರಿ-ವಾಘಾ ಗಡಿ ಮೂಲಕ ಭಾರತ ತೊರೆದ 272 ಪಾಕ್ ಪ್ರಜೆಗಳು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com