ಕಂಟೇನರ್ ಗೆ ಕಾರು ಡಿಕ್ಕಿ: ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಐವರು ಸಾವು

ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ
ಕೊಪ್ಪಳ: ಮಗನ ತಪ್ಪಿಗೆ ಅಪ್ಪನಿಗೆ ಶಿಕ್ಷೆ; ಅಪ್ರಾಪ್ತನಿಂದ ಅಪಘಾತ, ಆಟೋ ಚಾಲಕನಿಗೆ ಬಿತ್ತು 1.4 ಕೋಟಿ ರೂ ದಂಡ!

ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಎರಿಟಿಗಾ ಕಾರು, ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com