ಕೆಂಪೇಗೌಡ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ಸರಣಿ ಅಪಘಾತ: 4 ಕಾರುಗಳು ಜಖಂ

ಹೆಬ್ಬಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿ, ಸಂಚಾರವನ್ನು ಸರಾಗಗೊಳಿಸಿದರು.
Car accident (Video credit-Karnataka portfolio)
ಕಾರುಗಳು ಜಖಂ(ವಿಡಿಯೊ ಕೃಪೆ ಕರ್ನಾಟಕ ಪೋರ್ಟ್ ಫೋಲಿಯೊ ಪೇಜ್)
Updated on

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ನಿನ್ನೆ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಕಾರುಗಳು ಪರಸ್ಪರ ಡಿಕ್ಕಿಹೊಡೆದು ಸರಣಿ ಅಪಘಾತ ಸಂಭವಿಸಿದ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಬೆಂಗಳೂರಿನಿಂದ ವಿಮಾನ ನಿಲ್ದಾಣದ ಕಡೆಗೆ ತೆರಳುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿಯಾಗಿದ್ದು, ಫ್ಲೈಓವರ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು.

ಅಪಘಾತದಲ್ಲಿ ಒಟ್ಟು ನಾಲ್ಕು ಕಾರುಗಳು ಒಳಗೊಂಡಿದ್ದು, ಕೆಲವು ವಾಹನಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ. ಯಾವುದೇ ಗಂಭೀರ ಗಾಯಗಳು ಅಥವಾ ಪ್ರಾಣಾಪಾಯವಾಗಿಲ್ಲದಿದ್ದರೂ, ವಾಹನ ಚಾಲಕರು ಮತ್ತು ಪ್ರಯಾಣಿಕರು ಆಘಾತಕ್ಕೊಳಗಾಗಿದ್ದಾರೆ.

ಹೆಬ್ಬಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿ, ಸಂಚಾರವನ್ನು ಸರಾಗಗೊಳಿಸಿದರು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com