ಹಾವು ಕಡಿತ: ಪ್ರತಿ ತ್ರೈಮಾಸಿಕದಲ್ಲಿ ಮರಣಗಳ ಪರಿಶೋಧನೆಗೆ ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಸೂಚನೆ

ಹಾವು ಕಡಿತದಿಂದ ಸಂಭವಿಸುವ ಮರಣಗಳ ಲೆಕ್ಕ ಪರಿಶೋಧನೆಯ ಜವಾಬ್ದಾರಿಯನ್ನು ‘ಎಚ್‌1ಎನ್‌1 ಮರಣದ ಲೆಕ್ಕ ಪರಿಶೋಧನಾ ಸಮಿತಿ‘ಗೆ ವಹಿಸಲಾಗಿದೆ. ಲೆಕ್ಕ ಪರಿಶೋಧನೆಯನ್ನು ಪರಿಶೀಲಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
snake bite (file pic)
ಹಾವು ಕಡಿತ (ಸಾಂಕೇತಿಕ ಚಿತ್ರ)PTI
Updated on

ಬೆಂಗಳೂರು: ಹಾವು ಕಡಿತದಿಂದ ಉಂಟಾಗುವ ಸಾವುಗಳನ್ನು ಪ್ರತಿ ತ್ರೈಮಾಸಿಕದಲ್ಲಿ ಪರಿಶೋಧನೆಗೆ ಮಾಡುವಂತೆ ಎಲ್ಲಾ ಜಿಲ್ಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಸೋಮವಾರ ಸೂಚನೆ ನೀಡಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಹಾವು ಕಡಿತದಿಂದ ಸಂಭವಿಸುವ ಮರಣಗಳ ಲೆಕ್ಕ ಪರಿಶೋಧನೆಯ ಜವಾಬ್ದಾರಿಯನ್ನು ‘ಎಚ್‌1ಎನ್‌1 ಮರಣದ ಲೆಕ್ಕ ಪರಿಶೋಧನಾ ಸಮಿತಿ‘ಗೆ ವಹಿಸಲಾಗಿದೆ. ಲೆಕ್ಕ ಪರಿಶೋಧನೆಯನ್ನು ಪರಿಶೀಲಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಹಾವು ಕಡಿತ ಪ್ರಕರಣಗಳ ಪರಿಶೀಲನಾ ಸಭೆಯನ್ನು ಮೂರು ತಿಂಗಳಿಗೊಮ್ಮೆ ಮಾಡಬೇಕು. ತಡೆಗಟ್ಟುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದೆ.

2023ರಲ್ಲಿ ಹಾವು ಕಡಿತದ 6,596 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 19 ಮಂದಿ ಮರಣ ಹೊಂದಿದ್ದರು. ಆನಂತರ ಹಾವು ಕಡಿತವನ್ನು ‘ಅಧಿಸೂಚಿತ ಕಾಯಿಲೆ’ ಎಂದು ಘೋಷಿಸಲಾಗಿತ್ತು. 2024ರಲ್ಲಿ 13,235 ಪ್ರಕರಣಗಳು ದಾಖಲಾಗಿದ್ದು, 100 ಜನರು ಮೃತಪಟ್ಟಿದ್ದರು.

ಹಾವು ಕಡಿತದಿಂದ ಉಂಟಾಗುವ ಅನಾರೋಗ್ಯ ಮತ್ತು ಮರಣವನ್ನು ತಪ್ಪಿಸಲು ಆರೋಗ್ಯ ಇಲಾಖೆ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆಗಳವರೆಗೆ ಹಾವಿನ ಪ್ರತಿವಿಷ (ಎಎಸ್‌ವಿ) ದಾಸ್ತಾನು ಇಟ್ಟುಕೊಳ್ಳಲು ಕ್ರಮ ಕೈಗೊಂಡಿತ್ತು. ಹಾವು ಕಡಿತ ಪ್ರಕರಣಗಳನ್ನು ನಿರ್ವಹಿಸಲು ವೈದ್ಯರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿತ್ತು.

ಎಲ್ಲೇ ಹಾವು ಕಡಿತದ ಘಟನೆಗಳಾದರೂ ಅವು ವಿಳಂಬವಿಲ್ಲದೇ ವರದಿಯಾಗಬೇಕು. ಹಾವು ಕಡಿತಕ್ಕೊಳಗಾದವರು ಸಾಂಪ್ರದಾಯಿಕ ನಂಬಿಕೆ ಇಟ್ಟುಕೊಂಡು ಹಳ್ಳಿ ಮದ್ದು ಮಾಡುವುದರ ಬದಲು, ಸಮಯ ವ್ಯರ್ಥ ಮಾಡದೇ ತಕ್ಷಣವೇ‌ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಬರುವಂತೆ ಮಾಡಬೇಕು. ಹಾವು ಕಡಿದಾಗ ಆಸ್ಪತ್ರೆಗೆ ಬರುವುದನ್ನು ತಡಮಾಡುವುದೇ ಮರಣಕ್ಕೆ ಮುಖ್ಯ ಕಾರಣವಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

snake bite (file pic)
ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com