
ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ಮುಂದಾಗಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಮೌರ್ಯ ಸರ್ಕಲ್‌ನಿಂದ ಅರ್ಧ ಕಿ.ಮೀ ಪಾದಯಾತ್ರೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿ, ಬಳಿಕ ನಿಯೋಗದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ರಾಜ್ಯ ಉಸ್ತುವಾರಿ ಸುರ್ಜೇವಾಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಎಂ, ಡಿಸಿಎಂ, ಕೆಲ ಸಚಿವರು, ಶಾಸಕರು ಭಾಗವಹಿಸಿ ಅಂತಿಮ ತೀರ್ಮಾನ ನಡೆಸಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಒಳಗೊಳ್ಳುವ ಮೂಲಕ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಕ್ರಿಯಾ ಯೋಜನೆಯನ್ನು ರೂಪಿಸಿದ್ದಾರೆಂದು ತಿಳಿದುಬಂದಿದೆ.
ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ ಎಚ್ ಮುನಿಯಪ್ಪ, ಬೈರತಿ ಸುರೇಶ್, ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್, ಡಾ ಎಂ ಸಿ ಸುಧಾಕರ್, ಎನ್ ಚಲುವರಾಯಸ್ವಾಮಿ, ಈಶ್ವರ್ ಖಂಡ್ರೆ, ಆರ್ ಬಿ ತಿಮ್ಮಾಪುರ್, ಎಂಎಲ್ ಸಿ ಬಿ ಕೆ ಹರಿಪ್ರಸಾದ್, ಶಾಸಕರಾದ ರೂಪಕಲಾ ಶಶಿದರ್, ಶರತ್ ಬಾಚೇಗೌಡ ಭಾಗವಹಿಸಿದ್ದರು
Advertisement