ಕಾಂಗ್ರೆಸ್‌ನ 'ಸಂವಿಧಾನ ವಿರೋಧಿ ಧೋರಣೆ' ವಿರುದ್ಧ ಆಗಸ್ಟ್ 5 ರಂದು ಬಿಜೆಪಿ ಪ್ರತಿಭಟನೆ: ಬಿ.ವೈ ವಿಜಯೇಂದ್ರ

ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಮ್ಮ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
BY Vijayendra
ಬಿವೈ ವಿಜಯೇಂದ್ರ
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷದ 'ಸಂವಿಧಾನ ವಿರೋಧಿ ವರ್ತನೆ' ವಿರುದ್ಧ ಪಕ್ಷವು ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶನಿವಾರ ಘೋಷಿಸಿದ್ದಾರೆ. ಅದೇ ದಿನ 'ಮತಗಳ್ಳತನ'ದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪ್ರತಿಭಟನೆ ನಡೆಯಲಿದ್ದಾರೆ.

ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಮ್ಮ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ನಡೆದಿದೆ ಎನ್ನಲಾದ 'ಮತಗಳ್ಳತನ'ದ ವಿರುದ್ಧ ಆಗಸ್ಟ್ 5ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ಅದೇ ಸ್ಥಳದಲ್ಲಿ ಪ್ರತಿಭಟನೆ ಆಯೋಜಿಸಲು ಬಿಜೆಪಿ ಬೆಂಗಳೂರು ಪೊಲೀಸರಿಂದ ಅನುಮತಿ ಕೋರಿತ್ತು. ಆದರೆ, ಕಾಂಗ್ರೆಸ್ ಈಗಾಗಲೇ ಅಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸ್ಥಳಾವಕಾಶದ ಕೊರತೆಯನ್ನು ಉಲ್ಲೇಖಿಸಿ ಅವರಿಗೆ ಅನುಮತಿ ನಿರಾಕರಿಸಲಾಯಿತು.

BY Vijayendra
ಚುನಾವಣಾ ಅಕ್ರಮ ಆರೋಪ: ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ; ಸೋಲು ಮರೆಮಾಚಲು ನಡೆಸುತ್ತಿರುವ ಹತಾಶ ಯತ್ನ- BJP ಟೀಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವರ್ತನೆಯನ್ನು 'ಸಂಪೂರ್ಣವಾಗಿ ಸಂವಿಧಾನಬಾಹಿರ' ಎಂದು ಕರೆದ ವಿಜಯೇಂದ್ರ, ಭಾರತೀಯ ಜನತಾ ಪಕ್ಷವು ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಅವರು ಪ್ರಜಾಪ್ರಭುತ್ವದ ಮೇಲೆ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಅವರು ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ. ಹಾಗಾದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಅಧಿಕಾರಕ್ಕೆ ಬಂತು? ಮೂರು ಉಪಚುನಾವಣೆಗಳಲ್ಲಿ ಅವರೇ ಹೇಗೆ ಗೆದ್ದರು?' ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ನಾಯಕತ್ವವನ್ನು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಮತ್ತು ಪ್ರಧಾನಿಯಾಗುವ ಅವರ ಕನಸು ಇನ್ನೂ ನನಸಾಗಿಲ್ಲ. ಚುನಾವಣಾ ಆಯೋಗದ ವಿರುದ್ಧ ಪದೇ ಪದೇ ಆರೋಪ ಮಾಡುವ ಮೂಲಕ ಗಾಂಧಿ ಈ ದೇಶದ ಜನರನ್ನು ಮತ್ತು ರಾಜ್ಯವನ್ನು ದಾರಿ ತಪ್ಪಿಸುತ್ತಿದ್ದಾರೆ. ಇದು ಈ ದೇಶದ ಮತದಾರರು ಮತ್ತು ಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು.

'ನಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ, ಬಿಜೆಪಿಯ ಎಲ್ಲ ಸಂಸದರು, ಶಾಸಕರು, ಎಂಎಲ್‌ಸಿಗಳು, ಮಾಜಿ ಸಂಸದರು, ಶಾಸಕರು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಧೋರಣೆಯ ವಿರುದ್ಧ ಪ್ರತಿಭಟಿಸಲಿದ್ದಾರೆ. ನಾವು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸುತ್ತೇವೆ' ಎಂದು ವಿಜಯೇಂದ್ರ ಹೇಳಿದರು.

BY Vijayendra
ಲೋಕಸಭಾ ಚುನಾವಣೆಯಲ್ಲಿ 'ಮತಗಳ್ಳತನ' ಆರೋಪ: ರಾಹುಲ್ ಗಾಂಧಿ ಬಳಿ ದಾಖಲೆಗಳಿವೆ ಎಂದ ಸಿಎಂ ಸಿದ್ದರಾಮಯ್ಯ!

'ರಾಹುಲ್ ಗಾಂಧಿ ಬಳಿ ಸಾಕ್ಷ್ಯವಿದ್ದರೆ, ಅದನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಬಳಿ ಯಾವುದೇ ಪುರಾವೆಗಳಿದ್ದರೆ, ಅವರು ಅದನ್ನು ಈ ದೇಶದ ಚುನಾವಣಾ ಆಯೋಗಕ್ಕೆ ನೀಡಬೇಕು. ಇಲ್ಲದಿದ್ದರೆ ಅವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಬಹುದು' ಎಂದು ಹೇಳಿದರು.

'ಹಾಗೆ ಮಾಡುವ ಬದಲು, ಬೆಂಗಳೂರಿನಲ್ಲಿ ನಾಟಕ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಅವರು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಬೇಕು. ಆಗಸ್ಟ್ 5 ರಂದು ರಾಹುಲ್ ಗಾಂಧಿ ಬೆಂಗಳೂರಿಗೆ ಬರುತ್ತಿದ್ದರೆ, ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಅಮಾಯಕರ ಜೀವಗಳನ್ನು ಬಲಿ ತೆಗೆದುಕೊಂಡಿದ್ದಕ್ಕಾಗಿ ಅವರು ಕರ್ನಾಟಕದ ಜನರಲ್ಲಿ ಕ್ಷಮೆಯಾಚಿಸಬೇಕು. ಈ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ "ಬೇಜವಾಬ್ದಾರಿ"ಯಿಂದ ಸಂಭವಿಸಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com