'ನಾನು ಮೆರಿಟ್ ವಿದ್ಯಾರ್ಥಿ, ದಯವಿಟ್ಟು ಕನಿಷ್ಠ ಶಿಕ್ಷೆ ಕೊಡಿ': ಕೋರ್ಟ್ ಹಾಲ್ ನಲ್ಲಿ ಬಿಕ್ಕಿ-ಬಿಕ್ಕಿ ಅಳುತ್ತಾ ಬೇಡಿಕೊಂಡ Prajwal Revanna

ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಲು ವಾದ-ಪ್ರತಿ ವಾದ ಆಲಿಸಿದೆ.
Prajwal Revanna breaks down in court
ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣIndia today
Updated on

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೋಷಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕುತ್ತಾ ಬೇಡಿಕೊಂಡ ಘಟನೆ ನಡೆದಿದೆ.

ಹೌದು.. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಲು ವಾದ-ಪ್ರತಿ ವಾದ ಆಲಿಸಿದೆ.

ವಿಚಾರಣೆ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಅವರನ್ನುಕೆಲ ಪ್ರಶ್ನೆಗಳನ್ನು ಕೇಳಿದ್ದು, ಈ ವೇಳೆ ಬಿಕ್ಕಿ ಬಿಕ್ಕಿ ಅಳುತ್ತಲೇ ಪ್ರಜ್ವಲ್ ರೇವಣ್ಣ ಉತ್ತರಿಸಿದರು. ಆರಂಭದಲ್ಲಿ ಇಂಗ್ಲಿಷ್​​ನಲ್ಲಿಯೇ ಮಾತು ಆರಂಭಿಸಿದ ಪ್ರಜ್ವಲ್ ರೇವಣ್ಣ, ನಂತರ ಕಣ್ಣೀರಿಡುತ್ತಾ ಕನ್ನಡದಲ್ಲಿ ಮಾತು ಮುಂದುವರಿಸಿದರು. ನಾನು ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದೇನೆ. ನಾನು ಮೆರಿಟ್ ವಿದ್ಯಾರ್ಥಿ.. ಬೇಕಿದ್ದರೆ ನನ್ನ ಹಿನ್ನಲೆ ನೋಡಿ..ಎಂದು ಹೇಳಿದ್ದಾರೆ.

Prajwal Revanna breaks down in court
KR Nagar ಅತ್ಯಾಚಾರ ಪ್ರಕರಣ: Prajwal Revanna ದೋಷಿ; ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು

ಅಂತೆಯೇ 'ನಾನು ಹಲವು‌ ಮಹಿಳೆಯರೊಂದಿಗೆ ಇಂತಹ ಕೃತ್ಯ ನಡೆಸಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ‌ ಮಾಡಿರಲಿಲ್ಲ. ನಾನು ರೇಪ್ ಮಾಡಿದ್ದರೆ ಅವರು ಯಾರಿಗೂ ಏಕೆ ಹೇಳಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಅವರು ಯಾಕೆ ಹಾಗೆ ಮಾಡಿದ್ದಾರೆ? ಪೊಲೀಸರೇ ಈ ಕೆಲಸ ಮಾಡಿದ್ದಾರೆ. ಚುನಾವಣೆ ವೇಳೆ ಈ ರೀತಿ ಮಾಡಿದ್ದಾರೆ ಎಂದರು.

ಅಂತೆಯೇ ಕಳೆದ 6 ತಿಂಗಳುಗಳಿಂದ ತಂದೆ ತಾಯಿಯನ್ನು ನೋಡಿಲ್ಲ. ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ. ದಯಮಾಡಿ ನನಗೆ ಕನಿಷ್ಠ ಶಿಕ್ಷೆ ಕೊಡಿ ಎಂದು ಪ್ರಜ್ವಲ್ ರೇವಣ್ಣ ನ್ಯಾಯಾಲಯವನ್ನು ಬೇಡಿಕೊಂಡಿದ್ದಾರೆ.

ರಾಜಕೀಯದಲ್ಲಿ ವೇಗವಾಗಿ ಬೆಳೆದಿದ್ದೇ ನನ್ನ ತಪ್ಪು

ಇದೇ ವೇಳೆ ತಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ತನ್ನ ಏಕೈಕ ತಪ್ಪು ರಾಜಕೀಯದಲ್ಲಿ 'ವೇಗದ' ಬೆಳವಣಿಗೆ. ವೇಗವಾಗಿ ಬೆಳೆದದ್ದೇ ನಾನು ಮಾಡಿದ ತಪ್ಪು ಎನಿಸುತ್ತದೆ. ನನಗೆ ಒಂದು ಕುಟುಂಬವಿದೆ, ನಾನು ಆರು ತಿಂಗಳಿನಿಂದ ನನ್ನ ತಾಯಿ ಮತ್ತು ತಂದೆಯನ್ನು ನೋಡಿಲ್ಲ..... ದಯವಿಟ್ಟು ನನಗೆ ಕಡಿಮೆ ಶಿಕ್ಷೆಯನ್ನು ನೀಡಿ ಎಂದು ನಾನು ನ್ಯಾಯಾಲಯವನ್ನು ವಿನಂತಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com