
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ವೊಂದು ಸಮುದ್ರ ರಾಕ್ಷಸ ಅಲೆಗಳಿಗೆ ತುತ್ತಾಗಿ ಪಲ್ಟಿಯಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.
ಹೌದು.. ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಪ್ಪುಂದದ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ಪವಾಡಸದೃಶ ರಕ್ಷಣೆ ಮಾಡಲಾಗಿದೆ.
ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ವಿಚಾರ ತಿಳಿಯುತ್ತಲೇ ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ದೊಡ್ಡ ದುರಂತ ತಪ್ಪಿದಂತಾಗಿದೆ.
ಜೀವ ಉಳಿಸಿದ ಲೈಫ್ ಜಾಕೆಟ್
ಉಪ್ಪುಂದದ ಮಡಿಕಲ್‌ನಲ್ಲಿ ದೋಣಿ ದುರಂತ ಸಂಭವಿಸಿದ್ದು, ಆಂಧ್ರ ಪ್ರದೇಶ ಮೂಲದ ಏಳು ಮಂದಿ ಮೀನುಗಾರರನ್ನು ಹೊಂದಿದ್ದ ಟ್ರಾಲ್ ಬೋಟ್ ಕಾಪು ಬೀಚ್‍ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಮೀನುಗಾರರು ಮುಂಜಾಗ್ರತಾ ಕ್ರಮವಾಗಿ ಲೈಫ್ ಜಾಕೆಟ್ ಧರಿಸಿದ್ದ ಕಾರಣ ಎಲ್ಲ 9 ಜನ ಮೀನುಗರಾರು ಪ್ರಾಣಪಾಯದಿಂದ ಪಾರಾಗಾಗಿದ್ದಾರೆ.
Advertisement