ನಾಳೆ ಒಂದು ದಿನ ಮುಷ್ಕರ ಕೈಬಿಡಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ!

ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಕರೆ ನೀಡಿದ್ದರು. ನಾಳಿನ ಮುಷ್ಕರ ಸಂಬಂಧ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗಿತ್ತು.
Representation purpose only
ಸಂಗ್ರಹ ಚಿತ್ರ
Updated on

ಬೆಂಗಳೂರು: ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಕರೆ ನೀಡಿದ್ದರು. ಇದೀಗ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಗೆ ಕರ್ನಾಟಕ ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ. ನಾಳಿನ ಮುಷ್ಕರ ಸಂಬಂಧ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ಮುಷ್ಕರ ನಡೆಸದಂತೆ ಆದೇಶಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಮುಷ್ಕರ ನಡೆದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಹೇಳಿರುವ ಹೈಕೋರ್ಟ್ ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಆಗಸ್ಟ್ 5 ರಿಂದ ಆರಂಭವಾಗಲಿರುವ ಪ್ರಸ್ತಾವಿತ ಅನಿರ್ದಿಷ್ಟಾವಧಿ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಮುಷ್ಕರದಿಂದಾಗಿ ಪ್ರಯಾಣಿಕರಿಗೆ ಆಗಬಹುದಾದ ತೊಂದರೆಯನ್ನು ತಪ್ಪಿಸಲು ಹೈಕೋರ್ಟ್ ಮಧ್ಯಪ್ರವೇಶಿಸುವಂತೆ ಕೋರಿ ಸುನಿಲ್ ಜೆ ಮತ್ತು ಇತರ ನಾಲ್ವರು ವಕೀಲರಾದ ದೀಕ್ಷಾ ಎನ್ ಅಮೃತೇಶ್ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ಕೆ ಎಸ್ ಮುದಗಲ್ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ವಿಭಾಗೀಯ ಪೀಠವು ಮಧ್ಯಂತರ ಆದೇಶವನ್ನು ನೀಡಿದೆ.

2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ, ಬಾಕಿ ಇರುವ ವೇತನ ಬಾಕಿ ಇತ್ಯರ್ಥ, ವೇತನ ಪರಿಷ್ಕರಣೆ ಸೇರಿದಂತೆ ಕೆಎಸ್‌ಆರ್‌ಟಿಸಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ KSRTC ನೌಕರರ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯು ಇತರ ಐದು ಕಾರ್ಮಿಕ ಸಂಘಗಳ ಬೆಂಬಲದೊಂದಿಗೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು.

Representation purpose only
Auto fare hike: ದರ ಏರಿಕೆಯಾಗಿದ್ದರೂ ಮೀಟರ್ ಅನುಸರಿಸದ ಚಾಲಕರು; ದುಪ್ಪಟ್ಟು ವಸೂಲಿ ಅಬಾಧಿತ!

ಮುಷ್ಕರಕ್ಕೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳು ಮತ್ತು ರಾಜ್ಯ ಸರ್ಕಾರ ನಡುವಿನ ಮಾತುಕತೆಗಳು ವಿಫಲವಾದರೆ ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದಿಸಿದರು. ಜುಲೈ 14ರಂದು ಅಗತ್ಯ ಸೇವಾ ನಿರ್ವಹಣಾ ಕಾಯ್ದೆಯನ್ನು ಜಾರಿಗೆ ತರುವ ಘೋಷಣೆಯ ನಂತರವೂ ಮುಷ್ಕರವನ್ನು ಘೋಷಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಸಂಚಾರ ಸುಗಮವಾಗಿ ನಡೆಯಬೇಕೆಂದರೆ ನ್ಯಾಯಾಲಯ ಮಧ್ಯಪ್ರವೇಶಿಸಬೇಕಾಗಿದೆ ಎಂದು ಅವರು ಮನವಿ ಮಾಡಿದ್ದರು.

ಏತನ್ಮಧ್ಯೆ, ಕೆಎಸ್‌ಆರ್‌ಟಿಸಿ ಪರ ಹಾಜರಾದ ವಕೀಲರು ಇಂದು ಮಾತುಕತೆ ನಡೆಯುತ್ತಿದೆ ಎಂದು ವಾದಿಸಿದರು. ಆಗಸ್ಟ್ 2ರಂದು ನಡೆದ ರಾಜಿ ಸಂಧಾನ ವಿಫಲವಾದ ನಂತರ ಆಗಸ್ಟ್ 7ಕ್ಕೆ ಮುಂದೂಡಲಾಗಿದೆ. ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕಾದರೆ, ಕೆಎಸ್‌ಆರ್‌ಟಿಸಿಗೆ 2,200 ಕೋಟಿ ರೂ. ಅಗತ್ಯವಿದೆ ಎಂದು ವಕೀಲರು ವಾದಿಸಿದರು. ಏತನ್ಮಧ್ಯೆ, ನ್ಯಾಯಾಲಯವು ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಮತ್ತು ಇತರರಿಗೆ ನೋಟಿಸ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com