
ಹುಬ್ಬಳ್ಳಿ: 2024ರ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ 23 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮೊದಲ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪಲ್ಲವಿ ಬಿ ಆರ್ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.
ನೇಹಾಳ ತಂದೆ ಹಿರೇಮಠ್ ಭಾವುಕ
ನನ್ನ ಮಗಳ ಜೀವ ತೆಗೆದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಇದು ನಮ್ಮ ಮೊದಲ ಗೆಲುವು ಎಂದು ಹಿರೇಮಠ್ ತಿಳಿಸಿದ್ದಾರೆ. ಆರೋಪಿಗೆ ಮರಣದಂಡನೆ ಶಿಕ್ಷೆಯಾಗುವವರೆಗೂ ತನ್ನ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. ಕಳೆದ 1 ವರ್ಷ 4 ತಿಂಗಳಿನಿಂದ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದು ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಲಾಗಿದೆ.
Advertisement