ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ: Youtubers ಮೇಲೆ ಸ್ಥಳೀಯರಿಂದ ಹಲ್ಲೆ, ಪೊಲೀಸರಿಂದ ಲಾಠಿ ಚಾರ್ಜ್; Video

ವಿನಃ ಕಾರಣ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ.
Attack on YouTubers
ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ
Updated on

ಧರ್ಮಸ್ಥಳ: ಧರ್ಮಸ್ಥಳದ (Dharmasthala) ಪಾಂಗಳ ಪ್ರದೇಶದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿನಃ ಕಾರಣ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುಟ್ಯೂಬರ್ (Youtubers) ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಇನ್ನು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು (Police) ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ನೇತ್ರಾವತಿ (Nethravathi) ಪಾಂಗಳ ಎಂಬಲ್ಲಿ ಯೂಟ್ಯೂಬರ್ ಗಳನ್ನು ನೋಡಿದ ಸ್ಥಳೀಯರು ಹಲ್ಲೆ ಮಾಡಿದ್ದು ಅವರ ಕ್ಯಾಮೆರಾಗಳನ್ನು ನಾಶ ಮಾಡಿದ್ದಾರೆ. ಇನ್ನು ಯೂಟ್ಯೂಬರ್ ಗಳ ಮೇಲಿನ ಹಲ್ಲೆಯನ್ನು ಖಂಡಿಸಿದ ನೂರಾರು ಸಂಖ್ಯೆಯಲ್ಲಿ ಯುವಕರು ಸೇರಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸದ್ಯ ಹಲ್ಲೆಗೊಳಗಾದ ಯೂಟ್ಯೂಬರ್ ವೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Attack on YouTubers
Dharmasthala mass burial case: ಪಾಯಿಂಟ್ 13 ರಲ್ಲಿ GPR ಬಳಸುವ ಮೊದಲು ತಜ್ಞರ ಅಭಿಪ್ರಾಯ ಪಡೆಯಲು SIT ಮುಂದು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com