
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ರಾತ್ರಿ ಭಾರೀ ಮಳೆಯಾಗಿದ್ದು ಇಂದು ಬೆಳಗ್ಗೆ ಕೂಡ ದಟ್ಟ ಮೋಡ ಕವಿದ ವಾತಾವರಣವಿದೆ. ಆಗಸ್ಟ್ 10ರವರೆಗೂ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಸಾಯಂಕಾಲದಿಂದ ಬೆಳಗ್ಗೆವರೆಗೂ ಮಳೆಯಾಗಿದೆ. ಎಚ್ಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ ಬೈಕ್ ಜೊತೆ ಕೊಚ್ಚಿ ಹೋದ ವ್ಯಕ್ತಿ
ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಮೇತ ವ್ಯಕ್ತಿ ನೀರಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೆಳಗಾವಿಯ ಜಿಲ್ಲೆಯ ತಾರಿಹಾಳ ಬಳಿ ನಡೆದಿದೆ.
ಹಳ್ಳ ದಾಟುವಾಗ ಬೈಕ್ ಸಮೇತ ನೀರಿನಲ್ಲಿ ಪಂಚಾಯತ್ ಸಿಬ್ಬಂದಿ ಸುರೇಶ್ ನಿಜಗುಣಿ ಗುಂಡನ್ನವರ್ (50ವ) ಕೊಚ್ಚಿ ಹೋಗಿದ್ದಾರೆ. ಪಂಚಾಯತ್‌ನಲ್ಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಘಟನೆ ನಡೆದಿದೆ. ಸುರೇಶ್‌ಗಾಗಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Advertisement