ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಗೆ 'ಕರ್ನಾಟಕ ವೇಮುಲಾ ಮಸೂದೆ' ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಮುಂದು!

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ಹಲವು ನಿದರ್ಶನಗಳಿವೆ ಎಂದು ಸಮಾಜ ಕಲ್ಯಾಣ ಸಚಿವ HC ಮಹದೇವಪ್ಪ ಹೇಳಿದರು.
HC Mahadevappa
ಎಚ್.ಸಿ ಮಹಾದೇವಪ್ಪ
Updated on

ಬೆಂಗಳೂರು: ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ, 2025 ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡುವ ನಿರೀಕ್ಷೆಯಿದೆ.

ಸೋಮವಾರದಿಂದ ಪ್ರಾರಂಭವಾಗುವ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ. ಸಾರ್ವಜನಿಕ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST), ಇತರ ಹಿಂದುಳಿದ ವರ್ಗಗಳು (OBC) ಮತ್ತು ಅಲ್ಪಸಂಖ್ಯಾತರಿಗೆ ಶಿಕ್ಷಣದ ಹಕ್ಕು ಮತ್ತು ಘನತೆಯನ್ನು ಕಾಪಾಡುವ ಪ್ರಮುಖ ಅಂಶಗಳನ್ನು ಈ ಮಸೂದೆ ಒಳಗೊಂಡಿದೆ.

ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತೊಡೆದುಹಾಕುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ಹಲವು ನಿದರ್ಶನಗಳಿವೆ ಎಂದು ಸಮಾಜ ಕಲ್ಯಾಣ ಸಚಿವ HC ಮಹದೇವಪ್ಪ ಹೇಳಿದರು.

TNIE ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆಯನ್ನೂ ನೀಡಲಾಗಿದೆ. ಮಸೂದೆಯು ಅವರಲ್ಲಿ ರಕ್ಷಣೆ ಮತ್ತು ವಿಶ್ವಾಸವನ್ನು ತುಂಬುವ ಗುರಿಯನ್ನು ಹೊಂದಿದೆ. ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿನ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಇದನ್ನು ಪೂರ್ವ-ವಿಶ್ವವಿದ್ಯಾಲಯ ಮತ್ತು ಶಾಲೆಗಳಿಗೆ ವಿಸ್ತರಿಸಲಾಗುತ್ತದೆಯೇ ಎಂದು ಕೇಳಿದಾಗ, ಮುಂದಿನ ದಿನಗಳಲ್ಲಿ ಇದನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

HC Mahadevappa
ಟಿಪ್ಪು KRS ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಹೇಳಿಲ್ಲ: HC ಮಹಾದೇವಪ್ಪ

ಮಸೂದೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ ಪ್ರಸ್ತಾಪ

ಇಂತಹ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ವಿಫಲರಾದ ಕಾಲೇಜು ಅಧಿಕಾರಿಗಳಿಗೆ ದಂಡ ಮತ್ತು ಜೈಲು ಶಿಕ್ಷೆಯನ್ನು ವಿಧಿಸಲು ಮಸೂದೆಯಲ್ಲಿ ಉಲ್ಲೇಖಿಸಿಸಲಾಗಿದೆ. ಅಂತಹ ಸಂಸ್ಥೆಗಳು ಸರ್ಕಾರಿ ಅನುದಾನವನ್ನು ಸಹ ಕಳೆದುಕೊಳ್ಳುತ್ತವೆ. ಇದನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಲಾಗುತ್ತದೆ. ಅಪರಾಧ ಮಾಡುವವರು ದಂಡ ಮತ್ತು ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ಚಕ್ರವರ್ತಿ ವೇಮುಲಾ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅವರು ಕ್ಯಾಂಪಸ್‌ನಲ್ಲಿ ಜಾತಿ ಅನ್ಯಾಯ, ದಲಿತ ಹಕ್ಕುಗಳ ಸಮಸ್ಯೆಗಳನ್ನು ಎತ್ತುವಲ್ಲಿ ಹೆಸರುವಾಸಿಯಾಗಿದ್ದರು. ದಲಿತರ ಹಕ್ಕುಗಳಿಗಾಗಿ ಹೋರಾಡುವ ಅಂಬೇಡ್ಕರೈಟ್ ವಿದ್ಯಾರ್ಥಿ ಸಂಘದಲ್ಲಿ ತೊಡಗಿಸಿಕೊಂಡಿದ್ದರಿಂದ ವಿಶ್ವವಿದ್ಯಾಲಯವು ಅವರ ಸ್ಟೈಫಂಡ್ ನಿಲ್ಲಿಸಿತ್ತು. ರೋಹಿತ್ ವೇಮುಲ ಅವರನ್ನು ಅಮಾನತುಗೊಳಿಸಲಾಯಿತು, ನಂತರ ವೇಮುಲ ಆತ್ಮಹತ್ಯೆ ಮಾಡಿಕೊಂಡರು.

ಈ ವರ್ಷದ ಆರಂಭದಲ್ಲಿ, ರಾಹುಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರ ಮಸೂದೆಯನ್ನು ತರುವಂತೆ ಒತ್ತಾಯಿಸಿದರು. "ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ಎದುರಿಸಬಾರದು ಎಂದು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುವ ಸಂಕಲ್ಪದಲ್ಲಿ ದೃಢವಾಗಿದೆ.

ರೋಹಿತ್, ಪಾಯಲ್, ದರ್ಶನ್ ಅವರಂತೆ ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ನಾವು ಈ ಕಾನೂನನ್ನು ಆದಷ್ಟು ಬೇಗ ತರುತ್ತೇವೆ" ಎಂದು ಸಿದ್ದರಾಮಯ್ಯ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com