
ಬೆಂಗಳೂರು: ನಗರ ರಸ್ತೆಗಳ ಪಾದಚಾರಿ ಮಾರ್ಗಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದುವರೆಸಿದ್ದು, ಪೂರ್ವ ಮತ್ತು ದಕ್ಷಿಣ ವಲಯಗಳ ಅತಿಕ್ರಮಣಗಳನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿದೆ.
ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ಪೂರ್ವವಲಯದ ಅರಮನೆ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಕಲ್ಲುಗಳು, ಇತರೆ ತ್ಯಾಜ್ಯ ವಸ್ತುಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು.
ಇದೇ ವೇಳೆ ದಕ್ಷಿಣ ವಲಯದಲ್ಲಿ ರಸ್ತೆಯ ಬದಿಯಲ್ಲಿ ಹಾಕಲಾಗಿದ್ದ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿದರು. ಮೇಖ್ರಿ ವೃತ್ತದ ರಾಮನ್ ರಸ್ತೆಯಲ್ಲೂ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಯಿತು.
ಐಎಎಫ್, ಪ್ರಧಾನ ಕಚೇರಿ ತರಬೇತಿ ಕಮಾಂಡ್ (ಎಚ್‌ಕ್ಯುಟಿಸಿ) ಗೇಟ್ ಬಳಿಯ ಪ್ರದೇಶದಲ್ಲಿ ಹೊಸದಾಗಿ ಸ್ಥಾಪಿಸಲಾದ ಡ್ರೈನ್ ಸ್ಲ್ಯಾಬ್ ಸುತ್ತಲೂ ಸಣ್ಣ ಕಲ್ಲುಗಳು ಮತ್ತು ಜಲ್ಲಿಕಲ್ಲುಗಳನ್ನು ತೆರವುಗೊಳಿಸಲಾಯಿತು.
ಬಳಿಕ ಪ್ಯಾಲೇಸ್ ಗುಟ್ಟಹಳ್ಳಿ ಮೇಲ್ಸೇತುವೆಯ ಮೇಲೆ ಮತ್ತು ಕೆಳಗೆ ನಿರಂತರವಾಗಿ ಶುಚಿಗೊಳಿಸುವ ಕಾರ್ಯವನ್ನು ಕೈಗೊಳ್ಳಲು ಮತ್ತು ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಪೂರ್ವ ವಲಯ ಆಯುಕ್ತ ಆರ್. ಸ್ನೇಹಲ್ ಅವರು ಸೂಚನೆ ನೀಡಿದರು.
Advertisement