ಲೋಕಸಭಾ ಚುನಾವಣೆ ವೇಳೆ ಮತಗಳ್ಳತನದ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: CM Siddaramaiah

ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವೆವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು.
CM Siddaramaiah vows legal action on LS poll fraud allegations
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಆರೋಪಗಳ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದ್ದು, ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಆರೋಪಗಳ ಬಗ್ಗೆ ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು. ಆದರೆ ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಮಾತ್ರ ಎಂದು ಹೇಳಿದರು.

ಅಂತೆಯೇ 'ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ. ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವೆವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು.

ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಸಾಕ್ಷಿ ಸಮೇತ ಎಲ್ಲ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲ ದಾಖಲೆಗಳು ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ಒಂದೇ ಸಣ್ಣ ಮನೆಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಲು ನ್ಯಾಯಾಂಗದ ಮಧ್ಯಪ್ರವೇಶ ಕುರಿತು ಪ್ರತಿಕ್ರಿಯಿಸಿದ ಅವರು, 'ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದರು.

CM Siddaramaiah vows legal action on LS poll fraud allegations
2024 assembly polls: ಇಬ್ಬರು 'ಮಹಾನ್' ವ್ಯಕ್ತಿಗಳು 160 ಸೀಟ್ ಖಚಿತ ಎಂದು ಹೇಳಿದ್ದರು; Sharad Pawar

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ, "ನಾವು ಅದನ್ನು ತಕ್ಷಣ ಮಾಡುತ್ತೇವೆ. ನಮ್ಮ ಕಾನೂನು ಸಲಹೆಗಾರ ಮತ್ತು ಅಡ್ವೊಕೇಟ್ ಜನರಲ್‌ಗೆ ಇದನ್ನು ಪರಿಶೀಲಿಸಿ ತ್ವರಿತವಾಗಿ ಪೂರ್ಣಗೊಳಿಸಲು ಹೇಳಿದ್ದೇನೆ. ರಾಹುಲ್ ಗಾಂಧಿ ಕೆಲವು ಸಮಸ್ಯೆಗಳನ್ನು ಎತ್ತಿದ್ದಾರೆ. ಆ ಎಲ್ಲಾ ವಿವರಗಳು ಭಾರತದ ಚುನಾವಣಾ ಆಯೋಗದಲ್ಲಿ ಲಭ್ಯವಿದೆ. ಅವರು ಚುನಾವಣಾ ಆಯೋಗದಲ್ಲಿ ಲಭ್ಯವಿರುವ ದಾಖಲೆಗಳನ್ನು ಮಾತ್ರ ಪ್ರಸ್ತುತಪಡಿಸಿದ್ದಾರೆ. ನಕಲಿ ಮತದಾರರ ಮೂಲಕ ದೊಡ್ಡ ಪ್ರಮಾಣದ ಚುನಾವಣಾ ವಂಚನೆ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಾವು ನಂಬಿರುವುದಾಗಿ ಸಿದ್ದರಾಮಯ್ಯ ದೃಢಪಡಿಸಿದರು.

ನ್ಯಾಯಾಂಗವು ಮಧ್ಯಪ್ರವೇಶಿಸಿ ಈ ವಿಷಯವನ್ನು ಸ್ವಂತವಾಗಿ ಏಕೆ ತೆಗೆದುಕೊಳ್ಳಬಾರದು ಎಂದು ಕೇಳಿದಾಗ, "ಚುನಾವಣೆಯಲ್ಲಿ ಕುಶಲತೆ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಇವಿಎಂ ಮತ್ತು ಮತದಾರರ ಪಟ್ಟಿ ಕುಶಲತೆ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇಬ್ರಾಹಿಂ ನಮ್ಮ ಪಕ್ಷದವರಲ್ಲ

‘ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು’ ಎಂಬ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1,600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ಗೊತ್ತಿಲ್ಲ’ ಎಂದರು.

ಅಂತೆಯೇ ‘ವರುಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ನನ್ನನ್ನು ಗೆಲ್ಲಿಸಿದರು ಎಂದು ನಾನು ಹೇಳಿಲ್ಲ. ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ನೇರ ಹೊಣೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com