'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನದ ಆರು ಯುದ್ಧ ವಿಮಾನಗಳು ಹಾಗೂ ಮತ್ತೊಂದು ದೊಡ್ಡ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ವಾರ್ಷಿಕ 16ನೇ ಏರ್ ಚೀಫ್ ಮಾರ್ಷಲ್ ಎಲ್ ಎಂ ಕತ್ರೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅಮರ್ ಪ್ರೀತ್ ಸಿಂಗ್ ಪಾಲ್ಗೊಂಡಿದ್ದರು. ಮೆಗಾ ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ ಪಾಕಿಸ್ತಾನದ ವಾಯು ನೌಕಾಪಡೆಗೆ ಉಂಟಾದ ದೊಡ್ಡ ಪ್ರಮಾಣದ ಹಾನಿಯನ್ನು ಬಹಿರಂಗಪಡಿಸಿದರು. ಪಾಕಿಸ್ತಾನದ 11 ಸೇನಾನೆಲೆಗಳು, ಆರು ಯುದ್ಧ ವಿಮಾನಗಳನ್ನು ಆಕಾಶದಲ್ಲಿ ಹಾಗೂ ಎರಡು ವಿಮಾನಗಳನ್ನು ನೆಲದ ಮೇಲೆ ನಾಶಪಡಿಸಲಾಗಿದೆ. ಅಲ್ಲದೆ ನಿರ್ಣಾಯಕ ವೈಮಾನಿಕ ದಾಳಿಯಲ್ಲಿ ರಷ್ಯಾ ನಿರ್ಮಿತ ಎಸ್-400 ವಾಯು ರಕ್ಷಣಾ ವ್ಯವಸ್ಥೆಯ ಪಾತ್ರವನ್ನು ಅವರು ಶ್ಲಾಘಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ನೂತನ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ. ಬೆಂಗಳೂರಿನ ಬೊಮ್ಮಸಂದ್ರದ ಸೂರ್ಯ ನಗರದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಹೊಂದಿರುವ ವಿಶ್ವ ದರ್ಜೆಯ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಬೊಮ್ಮಸಂದ್ರದಲ್ಲಿ ತಲೆ ಎತ್ತಲಿರುವ ಈ ಸ್ಟೇಡಿಯಂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ರಾಜ್ಯ ಸರ್ಕಾರದ ಆರ್ಥಿಕ ಬೆಂಬಲವಿಲ್ಲದೆ ಒಟ್ಟು 1,650 ಕೋಟಿ ರೂಪಾಯಿಯನ್ನು ಕೆಎಚ್‌ಬಿಯೇ ವಿನಿಯೋಗಿಸುತ್ತೆದ. ಪ್ರಸ್ತಾವಿತ ಕ್ರೀಡಾ ಸಂಕೀರ್ಣ 100 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶ ಕಲ್ಪಿಸುತ್ತದೆ.
ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಿಎಂ ಕಚೇರಿ ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿದ್ದು ನಾಳೆ ಮೋದಿ ನಾಲ್ಕು ಗಂಟೆಗಳ ಕಾಲ ಬೆಂಗಳೂರಿನಲ್ಲಿ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ ವಂದೇ ಭಾರತ್ ಟ್ರೈನ್ ಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ವರ್ಚುವಲ್ ಆಗಿ ಅಮೃತ್ಸರ್- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್)- ಪುಣೆಯ ಮತ್ತೆರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ನಂತರ ಹಳದಿ ಮಾರ್ಗದಲ್ಲಿರುವ ಆರ್‌ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. 11:45 ರಿಂದ 12:50 ರ ನಡುವೆ ಹಳದಿ ಮಾರ್ಗಕ್ಕೆ (5 ತಲುಪುವ) ಹಸಿರು ನಿಶಾನೆ ತೋರಿ, ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣಕ್ಕೆ ಮೆಟ್ರೋ ಮೂಲಕ ಸಂಚರಿಸಲಿದ್ದಾರೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ನಕಲಿ ಮತದಾನ ಆರೋಪ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕಾರಣಿಗಳ ವಕ್ಸಮರ ಜೋರಾಗಿದೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ. ಮತ ಏಣಿಕೆ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ.
ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ನಟ ಧೃವ ಸರ್ಜಾ ವಿರುದ್ಧ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಘವೇಂದ್ರ ಹೆಗ್ಗಡೆ ಎಂಬುವವರು ಧೃವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 3 ಕೋಟಿ ರೂಪಾಯಿ ವಂಚನೆ ಪ್ರಕರಣ ಇದಾಗಿದ್ದು, ಬಡ್ಡಿ ಸೇರಿ ಆ ಹಣ ಈಗ 9 ಕೋಟಿ ರೂಪಾಯಿ ಆಗಿದೆ ಎಂದು ನಿರ್ಮಾಪಕ ಆರೋಪಿಸಿದ್ದಾರೆ. ಧ್ರುವ ಸರ್ಜಾ ಅವರು ದಿ ಸೋಲ್ಜರ್ ಹೆಸರಿನ ಸಿನಿಮಾದ ಸ್ಕ್ರಿಪ್ಟ್ ಕೂಡ ನೀಡಿದರು ಎಂದು ರಾಘವೇಂದ್ರ ಹೆಗ್ಡೆ ಅಂಬೋಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Advertisement