Operation Sindoor ಯಶಸ್ಸಿಗೆ ಭಾರತದ ತಾಂತ್ರಿಕ ಪರಾಕ್ರಮ ಕಾರಣ; ಕರ್ನಾಟಕದ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಆಪರೇಷನ್ ಸಿಂಧೂರದಲ್ಲಿ ಬೆಂಗಳೂರು ಮತ್ತು ನಗರದ ಯುವಕರು ಪ್ರಮುಖ ಪಾತ್ರ ವಹಿಸಿದ್ದಾರೆ.
PM Narendra Modi addresses the gathering during an event to lay the foundation stone of development projects and the inauguration of the Yellow Line of Metro in Bengaluru
ಬೆಂಗಳೂರಿನಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ನಮ್ಮ ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
Updated on

ಬೆಂಗಳೂರು: ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸಿನ ಹಿಂದೆ ಭಾರತೀಯ ತಂತ್ರಜ್ಞಾನ ಮತ್ತು ಮೇಕ್ ಇನ್ ಇಂಡಿಯಾ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಮೆಟ್ರೋ ಹಂತ-3 ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದೊಳಗಿನ ಭಯೋತ್ಪಾದಕ ನೆಲೆಗಳನ್ನು ನಾಶಮಾಡುವಲ್ಲಿ ಭಾರತದ ಸಾಮರ್ಥ್ಯವನ್ನು ಪ್ರದರ್ಶಿಸಿದ ಆಪರೇಷನ್ ಸಿಂಧೂರ ಸಮಯದಲ್ಲಿ ಜಗತ್ತು ಮೊದಲ ಬಾರಿಗೆ ಭಾರತದ ಹೊಸ ಮುಖವನ್ನು ನೋಡಿತು ಎಂದು ಹೇಳಿದರು.

'ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತದ ಹೊಸ ಮುಖವನ್ನು ಜಗತ್ತು ಮೊದಲ ಬಾರಿಗೆ ನೋಡಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದಲ್ಲಿ ಹುದುಗಿದ್ದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಾಶಮಾಡುವ ಮೂಲಕ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನವನ್ನು ಮಣಿಯುವಂತೆ ಮಾಡಿತು. ಈ ಮೂಲಕ ತನ್ನ ಸಾಮರ್ಥ್ಯ ಏನೆಂಬುದನ್ನು ಪ್ರದರ್ಶಿಸಿತು' ಎಂದರು.

'ಆಪರೇಷನ್ ಸಿಂಧೂರ ಯಶಸ್ಸಿನ ಹಿಂದೆ ನಮ್ಮ ತಂತ್ರಜ್ಞಾನ ಮತ್ತು ಮೇಕ್ ಇನ್ ಇಂಡಿಯಾದ ಬಲವಿದೆ. ಆಪರೇಷನ್ ಸಿಂಧೂರದಲ್ಲಿ ಬೆಂಗಳೂರು ಮತ್ತು ನಗರದ ಯುವಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಬೆಂಗಳೂರು ವಿಶ್ವದ ದೊಡ್ಡ ನಗರಗಳೊಂದಿಗೆ ಗುರುತಿಸಲ್ಪಟ್ಟಿದೆ ಎಂದು ಅವರು ಹೇಳಿದರು.

ಭಾರತವು ಜಾಗತಿಕವಾಗಿ ಸ್ಪರ್ಧಿಸುವುದಲ್ಲದೆ, ಮುನ್ನಡೆಸಬೇಕು. ನಮ್ಮ ನಗರಗಳು ಸ್ಮಾರ್ಟ್, ವೇಗ ಮತ್ತು ಪರಿಣಾಮಕಾರಿಯಾದಾಗ ಮಾತ್ರ ನಾವು ಪ್ರಗತಿ ಹೊಂದುತ್ತೇವೆ. ಈ ಸಂದರ್ಭದಲ್ಲಿ, ತಮ್ಮ ಸರ್ಕಾರ ಆಧುನಿಕ ಮೂಲಸೌಕರ್ಯಗಳನ್ನು ಪೂರ್ಣಗೊಳಿಸುವತ್ತ ಒತ್ತು ನೀಡಿದೆ ಎಂದು ಅವರು ಹೇಳಿದರು.

21ನೇ ಶತಮಾನದಲ್ಲಿ ನಗರ ಯೋಜನೆ ಮತ್ತು ನಗರ ಮೂಲಸೌಕರ್ಯಗಳು ಬಹಳ ಅಗತ್ಯವಾಗಿವೆ ಮತ್ತು ಬೆಂಗಳೂರಿನಂತಹ ನಗರಗಳನ್ನು ಭವಿಷ್ಯಕ್ಕಾಗಿ ನಾವು ಸಿದ್ಧಪಡಿಸಬೇಕಾಗಿದೆ. ಬೆಂಗಳೂರು ಯಾವಾಗಲೂ ನಗರದ ಸ್ಥಾಪಕ ಕೆಂಪೇಗೌಡರ ಪರಂಪರೆಯನ್ನು ಉಳಿಸಿಕೊಂಡಿದೆ ಮತ್ತು ಅವರ ಕನಸನ್ನು ನನಸಾಗಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ನಾವು ಬೆಂಗಳೂರನ್ನು ನವ ಭಾರತದ ಉದಯದ ಸಂಕೇತವಾಗಿ ನೋಡುತ್ತಿದ್ದೇವೆ. ಇದು ಆಧ್ಯಾತ್ಮಿಕ ಜ್ಞಾನವನ್ನು ಹೊಂದಿರುವ ಮತ್ತು ತಂತ್ರಜ್ಞಾನ ಜ್ಞಾನವನ್ನು ಕಾರ್ಯರೂಪಕ್ಕೆ ತರುವ ನಗರ ಎಂದು ಮೋದಿ ಹೇಳಿದರು.

PM Narendra Modi addresses the gathering during an event to lay the foundation stone of development projects and the inauguration of the Yellow Line of Metro in Bengaluru
Bengaluru Metro Yellow Line: ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಸೋಮವಾರದಿಂದ ಸಂಚಾರ ಆರಂಭ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com