
ಬೆಂಗಳೂರಿನಲ್ಲಿ ನಡೆದ 'Next-Gen Mobility for a Next-Gen City' ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಕೆಲವು ಸಾಲುಗಳನ್ನು ಮಾತನಾಡುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು.
ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಆರ್.ವಿ. ರಸ್ತೆಯಿಂದ (ರಾಗಿಗುಡ್ಡ) ಬೊಮ್ಮಸಂದ್ರವರೆಗಿನ ಹಳದಿ ಮಾರ್ಗದ ಮೆಟ್ರೋ ಸಂಚಾರವನ್ನು ಉದ್ಘಾಟಿಸಿದರು.
ನಮ್ಮ ಮೆಟ್ರೋದ ಹಳದಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು. ಇದು ಸುಮಾರು 7,160 ಕೋಟಿ ರೂ.ಗಳ ಯೋಜನೆಯಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ, ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾಗೆ ಮತ್ತು ಪುಣೆಗೆ ನಾಗ್ಪುರ (ಅಜ್ನಿ) ರೈಲುಗಳು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಚಾಲನೆ ನೀಡಿದರು.
15,610 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಮ್ಮ ಮೆಟ್ರೋ ರೈಲು ಹಂತ-3 ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.
Advertisement