ರಾಜ್ಯದಲ್ಲಿ 10 ನೇ ತರಗತಿ ಉತ್ತೀರ್ಣ ಅಂಕ ಇಳಿಕೆಗೆ ವಿರೋಧ: ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಎಂದ RTE group!

ಈ ಕ್ರಮವು ಶಿಕ್ಷಣದ ಗುಣಮಟ್ಟವನ್ನು ಹದಗೆಡಿಸುತ್ತದೆ ಎಂದು PAFRE ಸಂಚಾಲಕ ಪ್ರೊ.ನಿರಂಜನಾರಾಧ್ಯ ಟೀಕಿಸಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ‘ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಕಾಯ್ದೆ 1966ಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿದ್ದುಪಡಿ ತಂದಿರುವುದನ್ನು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಪೀಪಲ್ಸ್ ಅಲೈಯನ್ಸ್ (PAFRE) ತೀವ್ರವಾಗಿ ವಿರೋಧಿಸಿದೆ. ಇದು ರಾಜ್ಯದ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದೆ.

ತಿದ್ದುಪಡಿಯು 10 ನೇ ತರಗತಿಯ ವಿದ್ಯಾರ್ಥಿಗಳು ಲಿಖಿತ ಮತ್ತು ಆಂತರಿಕ ಮೌಲ್ಯಮಾಪನಗಳಲ್ಲಿ ಕನಿಷ್ಠ ಶೇ. 33 ರಷ್ಟು ಅಂಕಗಳನ್ನು ಗಳಿಸಿದರೆ ಮತ್ತು ಪ್ರತಿ ವಿಷಯದಲ್ಲಿ ಶೇ. 30% ರಷ್ಟು ಅಂಕಗಳನ್ನು ಗಳಿಸಿದರೆ "ಉತ್ತೀರ್ಣರಾಗಿದ್ದಾರೆ" ಎಂದು ಘೋಷಿಸಲು ಅವಕಾಶ ಕಲ್ಪಿಸುತ್ತದೆ.

ಈ ಕ್ರಮವು ಶಿಕ್ಷಣದ ಗುಣಮಟ್ಟವನ್ನು ಹದಗೆಡಿಸುತ್ತದೆ ಎಂದು PAFRE ಸಂಚಾಲಕ ಪ್ರೊ.ನಿರಂಜನಾರಾಧ್ಯ ಟೀಕಿಸಿದ್ದಾರೆ.

ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವುದರಿಂದ ಈಗಾಗಲೇ ಆಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ದುರ್ಬಲಗೊಳಿಸುವ ಅಪಾಯವಿದೆ. ಅಲ್ಲದೇ ಕನ್ನಡ ಭಾಷೆ ಮತ್ತು ಸಾಂಸ್ಕೃತಿಕ ಗುರುತನ್ನು ದುರ್ಬಲಗೊಳಿಸಬಹುದು ಎಂದು PAFRE ಎಚ್ಚರಿಸಿದೆ. ಇದನ್ನು ಎಲ್ಲ ಕನ್ನಡ ಪರ ಸಂಘಟನೆಗಳು ವಿರೋಧಿಸಬೇಕು ಎಂದು ಒತ್ತಾಯಿಸಿದೆ.

ಶಿಕ್ಷಕರ ಕೊರತೆ ಮತ್ತು ಕಳಪೆ ಮೂಲಸೌಕರ್ಯಗಳಂತಹ ಆಳವಾದ ಬೇರೂರಿರುವ ಸಮಸ್ಯೆಗಳನ್ನು ಪರಿಹರಿಸುವ ಬದಲು, ಉತ್ತೀರ್ಣತೆಯ ಶೇಕಡಾವಾರು ಹೆಚ್ಚಿಸಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಮಂಡಳಿ ಅಧ್ಯಕ್ಷರಿಗೆ ಪತ್ರದಲ್ಲಿ ಹೇಳಲಾಗಿದೆ.

ಅನೇಕ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, ಸುಮಾರು 8,000 ಶಾಲೆಗಳು ಕೇವಲ ಒಬ್ಬ ಶಿಕ್ಷಕರೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಆಗಾಗ್ಗೆ ಅನೇಕ ತರಗತಿಗಳು ಮತ್ತು ವಿಷಯಗಳನ್ನು ಅವರೇ ನಿರ್ವಹಿಸುತ್ತಿದ್ದಾರೆ. ಕೆಲವು ಪ್ರೌಢಶಾಲೆಗಳಲ್ಲಿ ಸಹ ಕೇವಲ ಒಬ್ಬ ಶಿಕ್ಷಕರಿದ್ದಾರೆ ಕಲ್ಯಾಣ ಕರ್ನಾಟಕದಲ್ಲಿ ಅರ್ಧದಷ್ಟು ಬೋಧಕ ಹುದ್ದೆಗಳು ಖಾಲಿ ಉಳಿದಿವೆ ಎಂದು ನಿರಂಜನಾರಾಧ್ಯ ಹೇಳಿದ್ದಾರೆ.

Casual Images
ಸಮಸ್ಯೆಗಳ ಮಹಾಪೂರದಿಂದ ನಲುಗಿಹೋಗುತ್ತಿವೆ ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು!

ಕಲಿಕಾ ಮಟ್ಟ ಕುಸಿಯುತ್ತಿದೆ ಎಂದು ಆರೋಪಿಸಿ ಶಿಕ್ಷಕರನ್ನು ಶೈಕ್ಷಣಿಕೇತರ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದೆ. "ಶಿಕ್ಷಕರು ಆಡಳಿತಾತ್ಮಕ ಮತ್ತು ಪಠ್ಯೇತರ ಕಾರ್ಯಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ. ಸರಕಾರ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಶಿಕ್ಷಕರು ಕೇವಲ ಬೋಧನೆಯತ್ತ ಗಮನ ಹರಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com