ಧರ್ಮಸ್ಥಳ ಪ್ರಕರಣ: ಕೋಮು ಗಲಭೆ ಪ್ರಚೋದಿಸಲು BJP ಶಾಸಕ S.R ವಿಶ್ವನಾಥ್ ಯತ್ನ; SIT ಗೆ ದೂರು ಸಲ್ಲಿಕೆ

ಎಸ್.ಆರ್. ವಿಶ್ವನಾಥ್ ಅವರು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಾ, ನಡೆಯುತ್ತಿರುವ ಎಸ್.ಐ.ಟಿ ತನಿಖೆಗೆ ಸಂಬಂಧಿಸಿದ ಕೆಲವು ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
S R vishwanath
ಎಸ್ ಆರ್ ವಿಶ್ವನಾಥ್
Updated on

ಮಂಗಳೂರು: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸಾಕ್ಷಿ ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ. ಹಾಗೂ ಸಾಕ್ಷಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೂಲಕ ತನಿಖೆಗೆ ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ ಎಂದು ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಬೆಂಗಳೂರಿನ ನಿವಾಸಿ ಪರಮೇಶ್ ವಿ ದೂರು ಸಲ್ಲಿಸಿದ್ದಾರೆ.

ಭಾನುವಾರ ಎಸ್.ಐ.ಟಿ ಮುಖ್ಯಸ್ಥರಿಗೆ ಸಲ್ಲಿಸಿದ ದೂರಿನಲ್ಲಿ ಪರಮೇಶ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಾ, ನಡೆಯುತ್ತಿರುವ ಎಸ್.ಐ.ಟಿ ತನಿಖೆಗೆ ಸಂಬಂಧಿಸಿದ ಕೆಲವು ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸಾಕ್ಷಿ-ದೂರುದಾರರ ಬಗ್ಗೆಯೂ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

15 ಸ್ಥಳಗಳಲ್ಲಿ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತರ ಶವಗಳನ್ನು ಹೂಳಿದ್ದಾರೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ . ಈ ವ್ಯಕ್ತಿಗೆ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ತಿಳಿದಿದ್ದರೆ, ಆತನೆ ಮೊದಲ ಅಪರಾಧಿಯಾಗಬೇಕು ಹಾಗೂ ಅವರನ್ನು ಗಲ್ಲಿಗೇರಿಸಬೇಕು ಎಂದು ವಿಶ್ವನಾಥ್ ಹೇಳುತ್ತಿರುವುದು ಕಂಡುಬರುತ್ತದೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ, ಸಾಕ್ಷಿ-ದೂರುದಾರರು ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿದ ನಂತರ, ಶಾಸಕ ವಿಶ್ವನಾಥ್ ದೂರುದಾರರಿಗೆ ಗಲ್ಲಿಗೇರಿಸುವಂತೆ ಕೇಳುವ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪರಮೇಶ್ ಆರೋಪಿಸಿದ್ದಾರೆ. ಶಾಸಕರ ವೀಡಿಯೊವನ್ನು ವೀಕ್ಷಿಸಿದ ನಂತರ, ದೂರುದಾರರು ಜೀವಕ್ಕೆ ಬೆದರಿಕೆ ಇದೆ ಎಂಬ ಭಯದಿಂದ ತನಿಖೆಗೆ ಸಹಕರಿಸಲು ನಿರಾಕರಿಸಿದರೆ, ಅದು ನಡೆಯುತ್ತಿರುವ ತನಿಖೆಯನ್ನು ಹಳಿತಪ್ಪಿಸುವ ಸಾಧ್ಯತೆ ಹೆಚ್ಚು ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.

S R vishwanath
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ, ಓರ್ವನ ಬಂಧನ; 7 FIR ದಾಖಲು

ಜವಾಬ್ದಾರಿಯುತ ಸ್ಥಾನದಲ್ಲಿರುವ ವಿಶ್ವನಾಥ್ ಅವರ ಹೇಳಿಕೆಯು ಅನುಮಾನವನ್ನು ಹುಟ್ಟುಹಾಕಿದೆ, ಆದ್ದರಿಂದ ಎಸ್‌ಐಟಿ ಅವರನ್ನು ವಶಕ್ಕೆ ತೆಗೆದುಕೊಂಡು ಅವರ ಹೇಳಿಕೆಯ ಹಿಂದಿನ ಪಿತೂರಿಯನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಎಸ್‌ಐಟಿ ತನಿಖೆ ಮತ್ತು ಸಾಕ್ಷಿ-ದೂರುದಾರರ ವಿರುದ್ಧದ ಹೇಳಿಕೆಯು, ಶಾಸಕರು ಈ ವಿಷಯವನ್ನು ದೇವಾಲಯ ಮತ್ತು ಹಿಂದೂ ಧರ್ಮದ ವಿರುದ್ಧದ ಪಿತೂರಿ ಎಂದು ಬಿಂಬಿಸುವ ಮೂಲಕ ಕೋಮು ಹಿಂಸಾಚಾರವನ್ನು ಪ್ರಚೋದಿಸಲು ಪಿತೂರಿ ನಡೆಸಿದ್ದಾರೆ ಎಂಬ ಅನುಮಾನವನ್ನು ಹುಟ್ಟುಹಾಕುತ್ತದೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಶಾಸಕರು ಮತ್ತು ಅವರ ಬೆಂಬಲಿಗರು 250 ಕ್ಕೂ ಹೆಚ್ಚು ವಾಹನಗಳಲ್ಲಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯು ಅವರು ಗಲಭೆಯನ್ನು ಪ್ರಚೋದಿಸಲು ಸಂಚು ರೂಪಿಸುತ್ತಿದ್ದಾರೆ ಎಂಬ ಅನುಮಾನವನ್ನು ಹುಟ್ಟುಹಾಕುತ್ತದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ, ಶಾಸಕರೇ ಸಂಪೂರ್ಣ ಹೊಣೆಗಾರರಾಗಿರುತ್ತಾರೆ. ಆದ್ದರಿಂದ, ಎಸ್‌ಐಟಿ ಎಸ್‌ಆರ್ ವಿಶ್ವನಾಥ್ ಅವರನ್ನು ಬಂಧಿಸಿ ಅವರಿಂದ ಮಾಹಿತಿಯನ್ನು ಸಂಗ್ರಹಿಸಬೇಕು ಮತ್ತು ಮುಂದಿನ ತನಿಖೆಗೆ ಅದನ್ನು ಬಳಸಿಕೊಳ್ಳಬೇಕು" ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com