ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ.
Ranya Rao Ramachandra Rao
ರನ್ಯಾ ರಾವ್-ರಾಮಚಂದ್ರ ರಾವ್
Updated on

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ. ಡಿಜಿಪಿ ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮೇಲ್ದರ್ಜೆಗೇರಿಸಲಾಗಿದೆ.

ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರವು ಡಿಜಿಪಿ (ಡಿಸಿಆರ್‌ಇ) ಐಪಿಎಸ್ (ವೇತನ) ನಿಯಮಗಳು 2016ರ ನಿಯಮ 12ರ ಅಡಿಯಲ್ಲಿ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಮಹಾನಿರ್ದೇಶಕ ಹುದ್ದೆಗೆ ಸಮಾನವಾಗಿದೆ ಎಂದು ಹೇಳಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಅವರ ಬಂಧನದ ನಂತರ ಕಳೆದ ಮಾರ್ಚ್‌ನಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ನೇತೃತ್ವದ ರಾಜ್ಯ ಸರ್ಕಾರ ನೇಮಿಸಿದ ತನಿಖಾ ಸಮಿತಿಯು ಪ್ರಶ್ನಿಸಿತು. ಪೊಲೀಸ್ ಪ್ರೋಟೋಕಾಲ್ ಸೇವೆಗಳ ದುರುಪಯೋಗ ಮತ್ತು ಪ್ರಕರಣದಲ್ಲಿ ಡಿಜಿಪಿ ರಾವ್ ಅವರ ಸಂಭಾವ್ಯ ಪಾತ್ರವನ್ನು ತನಿಖೆ ಮಾಡಲು ಗೌರವ್ ಗುಪ್ತಾ ಸಮಿತಿಯನ್ನು ರಚಿಸಲಾಯಿತು. ಹೀಗಾಗಿ ಮಾರ್ಚ್ 15ರಂದು ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಯಿತು.

Ranya Rao Ramachandra Rao
ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜೈಲೇ ಗತಿ; ಜಾಮೀನು ಪಡೆಯಲು ಅವಕಾಶವೇ ಇಲ್ಲ!

ವಿಚಾರಣೆಯ ಸಮಯದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ತಪಾಸಣೆ ಮತ್ತು ಚೆಕ್ಔಟ್ ತಪ್ಪಿಸಿಕೊಳ್ಳಲು ರನ್ಯಾ ನಿಯಮಗಳನ್ನು ಉಲ್ಲಂಘಿಸಿ ಪೊಲೀಸ್ ಬೆಂಗಾವಲುಗಳನ್ನು ದುರುಪಯೋಗಪಡಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿತ್ತು. ಜುಲೈ ಆರಂಭದಲ್ಲಿ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ COFEPOSA ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಯಿತು.

Ranya Rao Ramachandra Rao
ಬೆಂಗಳೂರು: ಮಾದಕ ದ್ರವ್ಯ ವಿರುದ್ಧ ಪೊಲೀಸರ ತೀವ್ರ ಕ್ರಮ; ಪತ್ತೆಹಚ್ಚಲು ಶ್ವಾನ ದಳ ನಿಯೋಜನೆ

ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (COFEPOSA) ವಿಷಯವನ್ನು ನಿರ್ವಹಿಸುವ ಸಲಹಾ ಮಂಡಳಿಯು ಇತ್ತೀಚೆಗೆ ರಾವ್ ಅವರ ಬಂಧನದ ಸಂಪೂರ್ಣ ಅವಧಿಯಲ್ಲಿ ಅವರಿಗೆ ಜಾಮೀನು ನೀಡಲಾಗುವುದಿಲ್ಲ ಎಂದು ತೀರ್ಪು ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com