ಆಶಾ ಕಾರ್ಯಕರ್ತೆಯರ ಮುಷ್ಕರ: ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಸೂಚನೆ

10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.
ASHA workers strike
ಆಶಾ ಕಾರ್ಯಕರ್ತೆಯರ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಆಶಾ ಕಾರ್ಯಕರ್ತೆಯರು ಇದೇ ಆಗಸ್ಟ್ 12 ರಿಂದ ಮೂರು ದಿನಗಳ ಕಾಲ ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ, ಪ್ರತಿಭಟನಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಿ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

ಮಾನ್ಯತೆ ಪಡೆದ ಆರೋಗ್ಯ ಕಾರ್ಯಕರ್ತೆಯರು ಜನವರಿಯಲ್ಲಿ ರಾಜ್ಯ ಸರ್ಕಾರ ಭರವಸೆ ನೀಡಿದಂತೆ 10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಅಧಿಸೂಚನೆಯಲ್ಲಿ, “ಜಿಲ್ಲಾ ಮಿತಿಯೊಳಗೆ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಂಗ್ರಹಿಸಿ ಪ್ರತಿಭಟನೆಯ ಸಮಯದಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು” ಎಂದು ಸೂಚಿಸಲಾಗಿದೆ.

ASHA workers strike
ಆಶಾ ಕಾರ್ಯಕರ್ತೆಯರ ಗೌರವಧನ 10 ಸಾವಿರ ರೂ ಗೆ ಹೆಚ್ಚಳ; ರಸ್ತೆಗೆ ನನ್ನ ಹೆಸರಿಡಿ ಅಂತ ಯಾರಿಗೂ ಹೇಳಿಲ್ಲ: ಸಿಎಂ

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರು ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com