ಸೆಪ್ಟೆಂಬರ್ ಕ್ರಾಂತಿ ಹೇಳಿಕೆ ನೀಡಿದ್ದ KN Rajanna ಗೆ ಆಗಸ್ಟ್ ನಲ್ಲೇ ಶಾಕ್! ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ

ಇತ್ತೀಚಿನ ದಿನಗಳಲ್ಲಿ ನಾಯಕತ್ವದ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆಗಳನ್ನು ಕೆಎನ್ ರಾಜಣ್ಣ ನೀಡುತ್ತಿದ್ದರು.
KN Rajanna
ಕೆಎನ್ ರಾಜಣ್ಣonline desk
Updated on

ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವದ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆಗಳನ್ನು ಕೆಎನ್ ರಾಜಣ್ಣ ನೀಡುತ್ತಿದ್ದರು.

ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿ ನಡೆಯಲಿದೆ ಎಂದು ಕೆಎನ್ ರಾಜಣ್ಣ ಹೇಳಿದ್ದರು. ಅಷ್ಟೇ ಅಲ್ಲದೇ ಪಕ್ಶದ ಹಿರಿಯ ನಾಯಕರ ಎಚ್ಚರಿಕೆಯ ಹೊರತಾಗಿಯೂ ಕೆಎನ್ ರಾಜಣ್ಣ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿಷಯವಾಗಿ ಪದೇ ಪದೇ ಹೇಳಿಕೆ ನೀಡುತ್ತಿದ್ದದ್ದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಹೈಕಮಾಂಡ್ ಸೂಚನೆ ಮೇರೆಗೆ ಕೆಎನ್ ರಾಜಣ್ಣ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಕೆಲವೇ ದಿನಗಳ ಮೊದಲು ಕೆಎನ್ ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿತ್ತು.

KN Rajanna
ಅಧಿಕಾರದಲ್ಲಿದ್ದರೂ ಮತಗಳ್ಳತನ ತಡೆಯುವಲ್ಲಿ ಕಾಂಗ್ರೆಸ್ ವಿಫಲ: ಸಚಿವ ರಾಜಣ್ಣ

ಮತಕಳ್ಳತನ ವಿಷಯದಲ್ಲಿ ರಾಹುಲ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ

ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ಸೇರಿದಂತೆ ದೇಶದ ಹಲವೆಡೆ ಮತಕಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪದ ಬಗ್ಗೆ ಚರ್ಚೆಯಾಗುತ್ತಿದ್ದಾಗ, ಕೆಎನ್ ರಾಜಣ್ಣ ಪಕ್ಷಕ್ಕೆ ಮುಜುಗುರ ಉಂಟು ಮಾಡುವ ಹೇಳಿಕೆ ನೀಡಿದ್ದರು.

ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು. ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ ಎಲ್ಲಾರು? ಎಂದು ರಾಜಣ್ಣ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com