ನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ

ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ.
Union Minister Shobha Karandlaje
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Updated on

ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ರಾತ್ರೋರಾತ್ರಿ ಧ್ವಂಸ ಮಾಡಿರುವುದು ನಮೆಗೆಲ್ಲ ನೋವು ತಂದಿದೆ. ಡಾ ವಿಷ್ಣುವರ್ಧನ್ ಸ್ಮಾರಕ ವನ್ನು ಶಾಶ್ವತವಾಗಿ ಕಾಪಾಡಿ. ಅದನ್ನು ರಾಷ್ಟ್ರೀಯ ಮಟ್ಟದ ಪ್ರವಾಸಿಗರ ಕೇಂದ್ರವಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.

ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ.‌ ಎಲ್ಲರ‌ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ.

ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ.

ಆ ನಿಟ್ಟಿನಲ್ಲಿ, ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೂಡಲೇ ಜಾಗದ ಮಾಲೀಕರಿಂದ ಸ್ವಾಧೀನಪಡಿಸಿಕೊಂಡು, ಅವರಿಗೂ ಸರ್ಕಾರಿ ನಿಯಮಾನುಸಾರ ಪರಿಹಾರ ನ್ಯಾಯಸಮ್ಮತ ನೀಡುವುದಲ್ಲದೇ, ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡ ನಾಡಿನ‌ ಕಲೆ, ಸಂಸ್ಕ್ರತಿಗಳ ಉಳಿವಿಗೆ ಕೊಡುಗೆ ನೀಡಿದ ಪ್ರತಿಯೊಬ್ಬ ಕಲಾವಿದನ ಘನತೆ-ಗೌರವ ಕಾಪಾಡುವುದು ಕನ್ನಡಿಗರ ಕರ್ತವ್ಯ. ಜನಪ್ರತಿನಿಧಿಯಾಗಿ ಸದಾ ಈ ನಿಲುವಿಗೆ ನಾವು ಬದ್ಧರಾಗಿದ್ದೇವೆಂದು ತಿಳಿಸಿದ್ದಾರೆ.

Union Minister Shobha Karandlaje
Vishnuvardhan memorial: 'ಕೈ ಚಾಚಿದ್ದು.. ಕಣ್ಣಿರು ಹಾಕಿದ್ದು ಸಾಕು'; ಮೌನ ಮುರಿದು Kiccha Sudeep ಹೇಳಿದ್ದೇನು?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com