
ಮಂಗಳೂರು: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತಂತೆ ಇದೀಗ ಮಾನವ ಹಕ್ಕಗಳ ಆಯೋಗವೂ ತನಿಖೆ ಆರಂಭಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.
ಆರಂಭಿಕವಾಗಿ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್ ನೇತೃತ್ವದ NHRC ತಂಡವು ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳು ಹೇಳಿಕೆಗಳನ್ನು ಒದಗಿಸಿದ್ದಾರೆ. ಈ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳದ ನೇತ್ರಾ ನದಿ ದಡದಲ್ಲಿ ಅನೇಕ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಶವಗಳನ್ನು ನನ್ನಿಂದ ಬಲವಂತವಾಗಿ ಹೂಳಿಸಲಾಗಿದೆ ಎಂಬ ಅನಾಮಿಕ ಸಾಕ್ಷಿದಾರನ ಹೇಳಿಕೆ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.
Advertisement