ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: 1,150 ಪುಟಗಳ ಆರೋಪಪಟ್ಟಿ ಸಲ್ಲಿಸಿದ CCB; ಪತ್ನಿ ಪಲ್ಲವಿ ಪ್ರಮುಖ ಆರೋಪಿ

1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ex-DGP Om Prakash and His Wife
ನಿವೃತ್ತ ಪೊಲೀಸ್ ​ಮಹಾನಿರ್ದೇಶಕ ಓಂ ಪ್ರಕಾಶ್ ಹಾಗೂ ಅವರ ಪತ್ನಿ
Updated on

ಬೆಂಗಳೂರು: ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ.

1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣ ದೇಶಾದ್ಯಂತ ತೀವ್ರ ಗಮನ ಸೆಳೆದಿತ್ತು.

ಅಪರಾಧದ ತೀವ್ರತೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿತ್ತು.

ಸಿಸಿಬಿ ಮೂಲಗಳ ಪ್ರಕಾರ, ಕೊಲೆಗೆ ಸಂಬಂಧಿಸಿದಂತೆ ಮೊದಲ ಎಸಿಎಂಎಂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಗಳು ಕೃತಿ ಅವರನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ಕೊಲೆ ಪಿತೂರಿಯಲ್ಲಿ ಕೃತಿ ಅವರ ಪಾತ್ರವಿದೆ ಎಂದು ಹೇಳಲು ಸಾಕಷ್ಟು ಪುರಾವೆಗಳಿಲ್ಲ.

ex-DGP Om Prakash and His Wife
ನಿವೃತ್ತ ಡಿಜಿಪಿ ಓಂ ಪ್ರಕಾಶ್ ದೇಹದ ಮೇಲೆ 34 ಗಾಯದ ಗುರುತು, ನಾಲ್ಕೈದು ಬಾರಿ ಇರಿತ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗ

ಘಟನೆ ನಡೆದ ಸಮಯದಲ್ಲಿ ಅವರು ಎಚ್‌ಎಸ್‌ಆರ್ ಲೇಔಟ್ ನಿವಾಸದ ಮೇಲಿನ ಮಹಡಿಯಲ್ಲಿದ್ದರು ಎಂದು ವರದಿಯಾಗಿದೆ. ಅಪರಾಧದಲ್ಲಿ ಅವರ ಪಾತ್ರವಿದೆ ಎಂದು ಹೇಳುವ ವಿಶ್ವಾಸಾರ್ಹ ಪುರಾವೆಗಳು ಲಭ್ಯವಿಲ್ಲದ ಕಾರಣ ಅವರ ಹೆಸರನ್ನು ಆರೋಪ ಪಟ್ಟಿಯಿಂದ ಕೈಬಿಡಲಾಗಿದೆ.

ಸದ್ಯ, ಪಲ್ಲವಿ ಅವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ವಿವರವಾದ ತನಿಖೆಯ ನಂತರ, ಸಿಸಿಬಿ ಅಧಿಕಾರಿಗಳು ಪಲ್ಲವಿ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com