
ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹಾಗೂ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲೂ ಅಸ್ಥಿಪಂಜರಗಳು ಪತ್ತೆಯಾಗದಿದ್ದರೆ ಎಸ್ಐಟಿ ಶೋಧ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಸಭೆಯಲ್ಲಿ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಕುರಿತು ಚರ್ಚೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಭೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣ ಸಂಬಂಧ ಎಸ್ಐಟಿ ರಚನೆ ಬಗ್ಗೆ ಜನರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ ಎಂದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಈಗಾಗಲೇ ಎಸ್ಐಟಿ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 13ನೇ ಸ್ಥಳದಲ್ಲೂ ಯಾವುದೇ ಅಸ್ಥಿಪಂಜರ ಪತ್ತೆಯಾಗದೇ ಹೋದಲ್ಲಿ ಎಸ್ಐಟಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗಬಹುದು. ಈ ಬಗ್ಗೆ ಸಚಿವರ ಜೊತೆಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆಂತು ತಿಳಿದುಬಂದಿದೆ.
ದೂರುದಾರ-ಸಾಕ್ಷಿಯು ಮಾಜಿ ನೈರ್ಮಲ್ಯ ಕಾರ್ಮಿಕರಾಗಿದ್ದು, ಒಂದು ದಶಕದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತರ ಶವಗಳನ್ನು ಹೂತಿದ್ದೆ ಎಂದು ಆರೋಪಿಸಿದ್ದಾರೆ. ಜುಲೈ 19 ರಂದು ರಚಿಸಲಾದ DGP ಪ್ರಣಬ್ ಮೊಹಂತಿ ನೇತೃತ್ವದಲ್ಲಿ SIT ಈ ಪ್ರಕರಣದ ತನಿಖೆ ನಡೆಸುತ್ತಿದೆ.
Advertisement