ಕಾರವಾರ ಶಾಸಕ ಸತೀಶ್ ಸೈಲ್ ನಿವಾಸ ಮೇಲೆ ED ದಾಳಿ

ಶಾಸಕ ಸತೀಶ್ ಸೈಲ್‌ ಎಂಸಿಎ ಅಧ್ಯಕ್ಷರೂ ಆಗಿದ್ದರು. ಅಧಿವೇಶನ‌ದ ಹಿನ್ನೆಲೆ‌ಯಲ್ಲಿ ಶಾಸಕ ಸತೀಶ್ ಸೈಲ್‌ ಬೆಂಗಳೂರಿಗೆ ತೆರಳಿದ್ದಾರೆ.
Residence of MLA Satish Sail
ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ನಿವಾಸ
Updated on

ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕ ಸತೀಶ್ ಸೈಲ್‌ ಎಂಸಿಎ ಅಧ್ಯಕ್ಷರೂ ಆಗಿದ್ದರು. ಅಧಿವೇಶನ‌ದ ಹಿನ್ನೆಲೆ‌ಯಲ್ಲಿ ಶಾಸಕ ಸತೀಶ್ ಸೈಲ್‌ ಬೆಂಗಳೂರಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಏಕಾಏಕಿ ಇಡಿ ಅಧಿಕಾರಿಗಳು ಸತೀಶ್ ಸೈಲ್‌ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಾಸಕರ ಮನೆಯ ಮುಂಭಾದಲ್ಲಿ ಸಿಐಎಸ್ಎಫ್ ಸಿಬ್ಬಂದಿಯ ಕಾವಲು ನಿಯೋಜಿಸಲಾಗಿದೆ.

Residence of MLA Satish Sail
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ಶಿಕ್ಷೆ ಅಮಾನತು

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com