
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರಿಂದ ಹಾವುಗಳು ಸೇರಿದಂತೆ ಹಲವಾರು ವಿಲಕ್ಷಣ ಮತ್ತು ಸಂರಕ್ಷಿತ ಸರೀಸೃಪಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಮಂಗಳವಾರ ತಪಾಸಣೆ ಸಮಯದಲ್ಲಿ ಪ್ರಯಾಣಿಕರ ಲಗೇಜ್ ಒಳಗೆ ಅಡಗಿಸಿಟ್ಟ ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಲಾದ ಹಲವಾರು ಸರೀಸೃಪಗಳು ಪತ್ತೆಯಾಗಿವೆ ಮತ್ತು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಅಕ್ರಮವಾಗಿ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ ಸರೀಸೃಪಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪ್ರಯಾಣಿಕನ ವಿರುದ್ಧ ತನಿಖೆ ನಡೆಯುತ್ತಿದೆ.
ವಶಪಡಿಸಿಕೊಂಡ ಸರೀಸೃಪಗಳನ್ನು ಮುಂದಿನ ಕ್ರಮಕ್ಕಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.
Advertisement