ಬಳ್ಳಾರಿ: ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನ ಬಂಧನ, ಸಿಸಿಟಿವಿಯಲ್ಲಿ ರೋಚಕ ದೃಶ್ಯ ಸೆರೆ! Video

ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
Police Nab Criminal Red-Handed
ATM ನಲ್ಲಿ ಹಣ ಕದಿಯುತ್ತಿದ್ದ ಕಳ್ಳನ ಚಿತ್ರ
Updated on

ಬಳ್ಳಾರಿ: ಬಳ್ಳಾರಿಯಲ್ಲಿ ಎಟಿಎಂ ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಮಲ್ಲಿಕಾರ್ಜುನ್ ಅವರಿಗೆ ಎಟಿಎಂನಲ್ಲಿ ಕಳ್ಳನ ಇರುವಿಕೆಯ ಬಗ್ಗೆ ಸುಳಿವು ಸಿಕ್ಕಿದ್ದು, ಕೂಡಲೇ ಎಎಸ್‌ಐ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಎಟಿಎಂಗೆ ಧಾವಿಸಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಆಂಧ್ರ ಪ್ರದೇಶದ ಅನಂತಪುರದ ವೆಂಕಟೇಶ ಎಂದು ಗುರುತಿಸಲಾಗಿದೆ. ಪೊಲೀಸ್ ಕಾರ್ಯಾಚರಣೆಯ ರೋಚಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆರೋಪಿ ವೆಂಕಟೇಶ ಎಟಿಎಂ ಕಿಯೋಸ್ಕ್ ಹೊತ್ತೊಯ್ಯಲು ಯತ್ನಿಸಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನು ಬಂಧಿಸಲು ಯತ್ನಿಸಿದ್ದಾರೆ. ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಇಬ್ಬರ ನಡುವೆ ತೀವ್ರ ಜಟಾಪಟಿಯಾಗಿದೆ. ಅಷ್ಟರಲ್ಲಿ ರಾತ್ರಿ ಬೀಟ್​ನ ಮತ್ತೊಬ್ಬ ಕಾನ್ಸ್​​ಟೇಬಲ್ ನಿಂಗಪ್ಪ ಎಎಸ್​ಐ ಸಹಾಯಕ್ಕೆ ಧಾವಿಸಿದ್ದಾರೆ. ನಂತರ ಆರೋಪಿಯನ್ನು ಥಳಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Police Nab Criminal Red-Handed
ದೆಹಲಿ: ಸಿನಿಮೀಯ ಶೈಲಿಯಲ್ಲಿ ಚೇಸ್, ಎನ್‌ಕೌಂಟರ್ ನಂತರ ಇಬ್ಬರು ಎಟಿಎಂ ಲೂಟಿಕೋರರ ಬಂಧನ!

ಬಳ್ಳಾರಿಯ ರಾತ್ರಿ ಬೀಟ್ ಪೊಲೀಸರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಸ್​ಪಿ ಶೋಭಾರಾಣಿ ಪೊಲೀಸರ ಕಾರ್ಯಕ್ಕೆ ಮೆಚ್ಚಿ ಸನ್ಮಾನಿಸಿ, ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com