ನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ರೇಣುಕಾಸ್ವಾಮಿ ಕುಟುಂಬ ಪ್ರತಿಕ್ರಿಯಿಸಿದ್ದು ಹೀಗೆ....

ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.
Renukaswamy wife, mother and father images
ರೇಣುಕಾಸ್ವಾಮಿ ಪತ್ನಿ, ತಾಯಿ ಹಾಗೂ ತಂದೆಯ ಚಿತ್ರ
Updated on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿದೆ. ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.

ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಸುಪ್ರೀಂಕೋರ್ಟ್ ಆದೇಶದಿಂದ ನ್ಯಾಯಾಂಗ ಮೇಲಿನ ವಿಶ್ವಾಸ ಹೆಚ್ಚಾಗಿದೆ ಎಂದರು. ನಮ್ಮ ಮನೆಯವರು ಪೂಜೆಗೆ ಕುಳಿತಾಗ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು ಎಂದು ಹೇಳಿದರು.

ಇನ್ನೂ ರೇಣುಕಾಸ್ವಾಮಿ ಪತ್ನಿ ಸಹನಾ ಮಾತನಾಡಿ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದರು. ರೇಣುಕಾಸ್ವಾಮಿ ತಂದೆ ಕಾಶಿನಾಥ್‌, ಜಾಮೀನು ರದ್ದತಿಯಿಂದ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Renukaswamy wife, mother and father images
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು

ರೇಣುಕಾಸ್ವಾಮಿ ಚಿಕ್ಕಪ್ಪ ಷಡಾಕ್ಷರಿ ಮಾತನಾಡಿ, ಸರ್ಕಾರ ಮುಂದೆ ಹೋಗದಿದ್ದರೆ ತಪ್ಪು, ಸರಿ ಅರ್ಥ ಆಗ್ತಿರಲಿಲ್ಲ. ಶೀಘ್ರ, ತ್ವರಿತ ವಿಚಾರಣೆಗೆ ಸುಪ್ರೀಂ ಆದೇಶಿಸಿದೆ. ಟ್ರಯಲ್‌ಕೋರ್ಟ್ ವಿಚಾರಣೆಗೆ ನಾವು ಒತ್ತಾಯಿಸಿದ್ದೆವು. ಸುಪ್ರೀಂ ಕೂಡ ನಮಗೆ ನ್ಯಾಯ ಒದಗಿಸಿದೆ. ಕಾನೂನನ್ನು ಗೌರವಿಸುತ್ತೇವೆ. ತಪ್ಪು ಮಾಡಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com