
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹಿಂದಿವಾಲಾಗಳ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಈ ಬಾರಿ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಸಾರ್ವಜನಿಕವಾಗಿಯೇ ಮಹಿಳಾ ಸಂಚಾರಿ ಪೊಲೀಸ್ ಅಧಿಕಾರಿ ಹಾಗೂ ಸಂಚಾರಿ ಪುರುಷ ಪೊಲೀಸ್ ಗೆ ಅಶ್ಲೀಲ ಪದಗಳನ್ನು ಬಳಕೆ ಮಾಡಿದ್ದಾಳೆ. ರಸ್ತೆಯಲ್ಲಿ ಬೈಕ್ ನಿಲ್ಲಿಸಲಾಗಿತ್ತು. ಹೀಗಾಗಿ ಸಂಚಾರಿ ಪೊಲೀಸರು ಬೈಕ್ ಗೆ ವೀಲ್ ಕ್ಯಾಪ್ ಆಗಿದ್ದರು.
ಇದನ್ನು ಪ್ರಶ್ನಿಸಿ ಸಂಚಾರಿ ಪೊಲೀಸರ ವಿರುದ್ಧವೇ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಇನ್ನು ಅಶ್ಲೀಲವಾಗಿ ಮಾತನಾಡುತ್ತಿದ್ದ ಮಹಿಳೆ ಜೊತೆಗೆ ಕೆಲಸ ಮಾಡುತ್ತಿದ್ದ ಬೈಕ್ ಸವಾರನಿಗೆ ನೀವು ಈ ರೀತಿ ವರ್ತಿಸಿದರೆ ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಪುರುಷರ ಪೊಲೀಸ್ ಅಧಿಕಾರಿ ಹೇಳುತ್ತಾರೆ.
ಆಗ ಮತ್ತೆ ಮಧ್ಯಪ್ರವೇಶಿಸಿದ ಮಹಿಳೆ ನಿನಗೆ ತಾಕತ್ತು ಇದ್ದರೆ ಅವನನ್ನು ಬಂಧಿಸು ಎಂದು ಪದೇ ಪದೇ ಅಶ್ಲೀಲ ಪದಗಳನ್ನು ಬಳಸಿದ್ದಾಳೆ.
ಆಗ ಪೊಲೀಸ್ ಅಧಿಕಾರಿ ನಿಮ್ಮ ಮಹಿಳೆಯಾಗಿದ್ದೀರಿ, ಅದಕ್ಕಾಗಿಯೇ ಮರ್ಯಾದೆಯಿಂದ ಮಾತನಾಡುತ್ತಿದ್ದೆವೆ. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೆ ಇರುತ್ತಿತ್ತು ಎಂದು ಹೇಳಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಗರಂ ಆಗಿದ್ದಾರೆ. ಈ ಕೂಡಲೇ ಮಹಿಳೆಯನ್ನು ಗಡಿಪಾರು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Advertisement