
ಬೆಂಗಳೂರು: ಮನೆಯೊಂದರಲ್ಲಿ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿ, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ ನಡೆದಿದೆ.
ಮೃತ ಬಾಲಕನ್ನು ಮುಬಾರಕ್ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement