Newsheadlines 16-08-2025 | ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು; ವಿಶ್ವ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರನಾಥ ಶ್ರೀ ವಿಧಿವಶ; ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬಿಜೆಪಿ ರ‍್ಯಾಲಿ

Newsheadlines 16-08-2025 | ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು; ವಿಶ್ವ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರನಾಥ ಶ್ರೀ ವಿಧಿವಶ; ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬಿಜೆಪಿ ರ‍್ಯಾಲಿ

1. ಪ್ಲಾಸ್ಟಿಕ್ ಅಂಗಡಿಯಲ್ಲಿ ಬೆಂಕಿ; ಒಂದೇ ಕುಟುಂಬದ 4 ಮಂದಿ ಸಜೀವ ದಹನ

ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿದ್ದ ವ್ಯಕ್ತಿಯೂ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಹಾಗೂ ನಮ್ಮ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಸಚಿವ ಜಮೀರ್ ಅಹ್ಮಮದ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಇದು ವಯಕ್ತಿಕ ಪರಿಹಾರವಾಗಿದ್ದು ಸರ್ಕಾರದಿಂದಲೂ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಚಿಕ್ಕಪೇಟೆ ಶಾಸಕ‌ ಉದಯ್ ಗರುಡಾಚಾರ್ ಮತ್ತು ಪೂರ್ವ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

2. ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ- DK Shivakumar

ಬಿಬಿಎಂಪಿ ಆರೋಗ್ಯ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, "ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು" ಎಂದು ಹೇಳಿದ್ದಾರೆ.

3. ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು

ಸ್ಯಾಂಡಲ್ ವುಡ್ ನ ಜನಪ್ರಿಯ ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಜಯ್ ರಾವ್- ಸಪ್ನಾ 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ರಾವ್, ಇದು ನನ್ನ ಪರ್ಸನಲ್ ವಿಷ್ಯ, ನಾವು ಇದನ್ನ ಇತ್ಯರ್ಥಪಡಿಸಿಕೊಳ್ಳುತ್ತೇವೆ. ಈಗ ಈ ಬಗ್ಗೆ ರಿಯಾಕ್ಟ್ ಮಾಡಿ ನನ್ನ ಮಗಳ ಭವಿಷ್ಯಕ್ಕೆ ಇದು ತೊಂದರೆ ಆಗೋದು ಬೇಡ. ನಮ್ಮ ಪ್ರೈವೆಸಿಯನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ.

4. ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ರ್ಯಾಲಿ

ಶ್ರೀಕ್ಷೇತ್ರ ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ, ಅವಹೇಳನ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ಕೈಗೊಂಡರು.ಬೆಳಗ್ಗೆ 6.30ಕ್ಕೆ ಬೆಂಗಳೂರಿನ ನೆಲಮಂಗಲ ಟೋಲ್‌ ಬಳಿಯಿಂದ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಶ್ರೀಕ್ಷೇತ್ರಕ್ಕೆ ತಲುಪಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್‌ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಸಂಕಲ್ಪ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿ ಅವರನ್ನು ಭೇಟಿ ಮಾಡಿ ದೇವಾಲಯ ಪಟ್ಟಣದ ಸುತ್ತಮುತ್ತಲಿನ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ನೈತಿಕ ಬೆಂಬಲವನ್ನು ವ್ಯಕ್ತಪಡಿಸುವ ನಿರೀಕ್ಷೆಯಿದೆ.

5. ವಿಶ್ವ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರನಾಥ ಶ್ರೀ ವಿಧಿವಶ

ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚಂದ್ರಶೇಖರನಾಥ ಸ್ವಾಮಿಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಚಂದ್ರಶೇಖರನಾಥ ಸ್ವಾಮೀಜಿ ಅವರ ಭಕ್ತಾದಿಗಳು ಅಂತಿಮ ದರ್ಶನ ಪಡೆದಿದ್ದು, ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನಡೆದಿದೆ. ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಹಲವು ಧಾರ್ಮಿಕ ಮುಖಂಡರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿಸಿದರು. ಮಾಜಿ ಪ್ರಧಾನಿ ದೇವೇಗೌಡ, ಸುತ್ತೂರು ಮಠದ ಶ್ರೀಗಳು, ಡಿಸಿಎಂ ಡಿಕೆ ಶಿವಕುಮಾರ್ ಚಂದ್ರಶೇಖರನಾಥ ಶ್ರೀಗಳ ಅಂತಿಮ ದರ್ಶನ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com