ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮತ್ತೊಂದು ದೂರು ದಾಖಲು

ಸಾಮಾಜಿಕ ಹೋರಾಟಗಾರ ಜಯಂತ್ ಎಂಬುವವರು ದೂರು ಸಲ್ಲಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಠಾಣೆಗೆ ಆಗಮಿಸಿ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ದೂರು ನೀಡಿದ್ದಾರೆ.
Dharmasthala mass burial probe
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಶೋಧ ಕಾರ್ಯnews drum
Updated on

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಕೊಲೆಯಾದ ಮಹಿಳೆಯ ಶವವನ್ನು ತರಾತುರಿಯಲ್ಲಿ ವಿಲೇವಾರಿ ಮಾಡಿರುವ ಕುರಿತು ಮತ್ತೊಂದು ದೂರು ಸಲ್ಲಿಕೆಯಾಗಿದೆ.

ಸಾಮಾಜಿಕ ಹೋರಾಟಗಾರ ಜಯಂತ್ ಎಂಬುವವರು ದೂರು ಸಲ್ಲಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಠಾಣೆಗೆ ಆಗಮಿಸಿ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಯಂತ್ ಅವರು, ಏಪ್ರಿಲ್ 6, 2010 ರಂದು ಧರ್ಮಸ್ಥಳದ ಲಾಡ್ಜ್‌ನಲ್ಲಿ 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿತ್ತು. ನಾನು ಆರ್‌ಟಿಐ ಮೂಲಕ ಕೆಲವು ವಿವರಗಳನ್ನು ಸಂಗ್ರಹಿಸಿದ್ದೇನೆ. ಮಹಿಳೆಯನ್ನು ಕೊಲೆ ಮಾಡಲಾಗಿತ್ತು. ಆದರೆ, ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಮಹಿಳೆಯನ್ನು ಕೊಂದು ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ತಿಳಿದಿದ್ದರೂ, ಸ್ಥಳೀಯ ಪೊಲೀಸರು ಒಂದು ದಿನದೊಳಗೆ ಶವವನ್ನು ವಿಲೇವಾರಿ ಮಾಡಲು ಹೇಗೆ ಅವಕಾಶ ನೀಡಿದರು? ಆ ದಿನ ಕರ್ತವ್ಯದಲ್ಲಿದ್ದ ಪೊಲೀಸರು ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ನಂತರ ಅಂತ್ಯಕ್ರಿಯೆಗಾಗಿ ಧರ್ಮಸ್ಥಳ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ್ದರು, ಈ ಕೊಲೆ ಪ್ರಕರಣವನ್ನು ಯಾರ ಸೂಚನೆಯ ಮೇರೆಗೆ ಮುಚ್ಚಲಾಯಿತು ಎಂದು ಪ್ರಶ್ನಿಸಿದ್ದಾರೆ.

ಆ ಅವಧಿಯಲ್ಲಿ 160 ಅಸ್ವಾಭಾವಿಕ ಸಾವುಗಳು ಸಂಭವಿಸಿವೆ ಎಂದು ಆರ್‌ಟಿಐ ಮಾಹಿತಿಯಿಂದ ತಿಳಿದುಬಂದಿದೆ. ಬಸ್ ನಿಲ್ದಾಣಗಳು, ಬೆಟ್ಟದ ರಸ್ತೆಯಲ್ಲಿ ಅನೇಕ ಶವಗಳು ಕಂಡುಬಂದಿವೆ. ಕೆಲವು ಆತ್ಮಹತ್ಯೆ ಪ್ರಕರಣಗಳಾಗಿವೆ. ಸರಿಯಾದ ತನಿಖೆ ನಡೆಸದೆ ಅಧಿಕಾರಿಗಳು ಆ ಎಲ್ಲಾ ಶವಗಳನ್ನು ವಿಲೇವಾರಿ ಮಾಡಿದ್ದಾರೆ ಎಂಬ ಅನುಮಾನಗಳಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com