Muslim ಯುವತಿಯರನ್ನ ಮದುವೆಯಾಗೋ ಹಿಂದೂ ಯುವಕರಿಗೆ 5 ಲಕ್ಷ ರೂ ಬಹುಮಾನ: ಯತ್ನಾಳ್ ವಿರುದ್ಧ ಮುಸ್ಲಿಂ ನಾಯಕರ ಆಕ್ರೋಶ
ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ಬಹುಮಾನ ನೀಡುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಮುಸ್ಲಿಂ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚೆಗೆ ಯತ್ನಾಳ್ ಅವರು ಮುಸ್ಲಿಂ ಹುಡುಗಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದು, ಇದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರಿಫ್ ಮತ್ತು ಇತರ ನಾಯಕರು ಯತ್ನಾಳ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಟೀಕಿಸಿದರು.
ಇದೇ ವೇಳೆ ಯತ್ನಾಳ್ ಅವರ ಕುಟುಂಬದ ಯುವತಿಯೊಬ್ಬಳು ಮುಸ್ಲಿಂ ಯುವಕನನ್ನು ಮದುವೆಯಾದರೆ, ಸಮುದಾಯದ ಪರವಾಗಿ ರೂ.1.11 ಕೋಟಿ ನೀಡುವುದಾಗಿ ಹೇಳಿದರು.
ಯತ್ನಾಳ್ ನಾಗರಿಕ ಸಮಸ್ಯೆಗಳನ್ನು ಬಗೆಹರಿಸುವ ಬದಲು ಪ್ರಚೋದನಕಾರಿ ಹೇಳಿಕೆಗಳಲ್ಲಿ ತೊಡಗಿದ್ದಾರೆ. ಇತ್ತೀಚಿನ ಮಳೆಯಲ್ಲಿ ಅನೇಕ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದವು. ಆದರೆ ಅವರು ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿಲ್ಲಯ ಸಂತ್ರಸ್ತರಿಗೆ ಪರಿಹಾರವನ್ನು ನೀಡಿಲ್ಲ.
2028 ರಲ್ಲಿ ಮುಖ್ಯಮಂತ್ರಿಯಾಗುತ್ತೇನೆಂಬಯತ್ನಾಳ್ ಅವರ ಹೇಳಿಕೆಯನ್ನು 'ಆಧಾರರಹಿತ' ಎಂದು ಹೇಳಿದ ಅವರು, ಪದೇ ಪದೇ ಪ್ರಚೋದನೆ ನೀಡುತ್ತಿದ್ದರೂ ಜಿಲ್ಲಾಡಳಿತ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಹೀಗಾಗಿ ಮುಂದೆ ಯಾವುದೇ ರೀತಿಯ ಪರಿಸ್ಥಿತಿಗಳು ಎದುರಾದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಏತನ್ಮಧ್ಯೆ ಅಲ್ಮೆಲ್ ಪಟ್ಟಣತ್ತೆ ಯತ್ನಾಳ್ ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಅವರ ಬೆಂಗಾವಲು ಪಡೆಯ ಮೇಲೆ ಕಪ್ಪು ಬಟ್ಟೆ ಎಸೆಯಲು ಯತ್ನಿಸಿದ ಆರೋಪದ ಮೇಲೆ ಯುವಕರ ಗುಂಪನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅಲ್ಮೆಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ