ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಧ್ಯಂತರ ವರದಿಗೆ ಯದುವೀರ್ ಆಗ್ರಹ

ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.
Yaduveer Wadiyar
ಸಂಸದ ಯದುವೀರ್ ಒಡೆಯರ್
Updated on

ಮೈಸೂರು: ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ದಳದ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ, ನಡೆಯುತ್ತಿರುವ ತನಿಖೆಯ ಪ್ರಗತಿಯನ್ನು ತಿಳಿದುಕೊಳ್ಳಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸುತ್ತಿದ್ದಾರೆ.

ಇಂತಹ ಅಪಪ್ರಚಾರವನ್ನು ಕೊನೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ, ಸರ್ಕಾರದಿಂದ ಉತ್ತರವನ್ನು ಕೋರಿದೆ. ಸರ್ಕಾರ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಿ ಎಲ್ಲಾ ಗೊಂದಲಗಳು ಮತ್ತು ಪಿತೂರಿಗಳನ್ನು ಕೊನೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Yaduveer Wadiyar
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: BJP-ಕಾಂಗ್ರೆಸ್ ಜಟಾಪಟಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com