
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಬಹುತೇಕ ಅಂತಿಮವಾಗಿದೆ. ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದ್ದು ನಾಳೆ ಆಗಸ್ಟ್ 20ರಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.
ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಅದರಂತೆ 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ.
Advertisement