ಕರಾವಳಿಯಲ್ಲಿ ಹಿಂದೂ ಹಬ್ಬಗಳ ಸಮಯದಲ್ಲಿ ಪೊಲೀಸರಿಂದ "ತೊಂದರೆ"!

ಗಣೇಶೋತ್ಸವ ಮತ್ತು ನವರಾತ್ರಿ ಆಚರಣೆಗಳಿಗೂ ಮುಂಚಿತವಾಗಿ ಇಂತಹ "ಅಡಚಣೆಗಳನ್ನು" ತಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕರಾವಳಿ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
Karnataka Assembly
ವಿಧಾನಸಭೆ
Updated on

ಬೆಂಗಳೂರು: ಬಿಜೆಪಿ ಶಾಸಕರು, ವಿಶೇಷವಾಗಿ ಕರಾವಳಿ ಜಿಲ್ಲೆಗಳ ಬಿಜೆಪಿ ಶಾಸಕರು ಬುಧವಾರ ಕರ್ನಾಟಕ ವಿಧಾನಸಭೆಯಲ್ಲಿ ಹಿಂದೂ ಹಬ್ಬಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳ ಸಮಯದಲ್ಲಿ ಕಾನೂನಿನ ಹೆಸರಿನಲ್ಲಿ ಪೊಲೀಸರು "ತೊಂದರೆ" ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗಣೇಶೋತ್ಸವ ಮತ್ತು ನವರಾತ್ರಿ ಆಚರಣೆಗಳಿಗೂ ಮುಂಚಿತವಾಗಿ ಇಂತಹ "ಅಡಚಣೆಗಳನ್ನು" ತಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕರಾವಳಿ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರು, ದಕ್ಷಿಣ ಕನ್ನಡ ಜಿಲ್ಲೆಯು ಕೃಷ್ಣ ಜನ್ಮಾಷ್ಟಮಿ, ಗಣೇಶೋತ್ಸವ ಮತ್ತು ನವರಾತ್ರಿಯ ಜೊತೆಗೆ ಯಕ್ಷಗಾನ, ಕೋಲ, ನೇಮೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳ ತಾಣವಾಗಿದೆ ಎಂದು ಹೇಳಿದರು.

ಶ್ರೀ ಕೃಷ್ಣ ಜನ್ಮಾಷ್ಟಮಿಯು ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ವಿರುದ್ಧ, ಸೌಂಡ್ ಸಿಸ್ಟಮ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.

Karnataka Assembly
ಗೌರಿ-ಗಣೇಶ ಹಬ್ಬ 2025: POP ಮೂರ್ತಿಗಳ ಮೇಲೆ ಕಣ್ಣಿಡಿ; ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ

ಪೊಲೀಸರ ಪ್ರಕಾರ, ಸರ್ಕಾರ ಮತ್ತು ನ್ಯಾಯಾಲಯದ ಆದೇಶಗಳನ್ನು ಉಲ್ಲೇಖಿಸಿ ರಾತ್ರಿ 10 ಗಂಟೆಯ ನಂತರ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ನ್ಯಾಯಾಲಯದ ಆದೇಶಗಳ ಹೊರತಾಗಿಯೂ ಅಂತಹ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, "ಹಿಂದೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಸಮಸ್ಯೆಯಾಗುತ್ತಿದೆ" ಎಂದು ಶಾಸಕರು ಆರೋಪಿಸಿದರು.

ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಹೇಳಿಕೆಗೆ ಆಡಳಿತ ಪಕ್ಷದ ಸದಸ್ಯರ ಬೆಂಬಲದೊಂದಿಗೆ ಸಚಿವರಾದ ಎನ್ ಚೆಲುವರಾಯಸ್ವಾಮಿ ಮತ್ತು ಶಿವಾನಂದ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು, ಇದು ಸದನದಲ್ಲಿ ಕೆಲಕಾಲ ಗದ್ದಲಕ್ಕೆ ಕಾರಣವಾಯಿತು.

ಸ್ಪೀಕರ್ ಯು ಟಿ ಖಾದರ್ ಮಧ್ಯಪ್ರವೇಶಿಸಿ, "ಒಂದು ಕಡೆ ಸಂಪ್ರದಾಯ ಮತ್ತು ಇನ್ನೊಂದು ಕಡೆ ಕಾನೂನು ಇದೆ. ದಕ್ಷಿಣ ಕನ್ನಡದಲ್ಲಿ ಜಾತಿ ಅಥವಾ ಧರ್ಮವನ್ನು ಲೆಕ್ಕಿಸದೆ ಹೆಚ್ಚಿನ ಧಾರ್ಮಿಕ ಕಾರ್ಯಕ್ರಮಗಳು ರಾತ್ರಿಯಲ್ಲಿ ನಡೆಯುತ್ತವೆ. ನಾವು ಯೋಚಿಸಿ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸಬೇಕು" ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಕೋಲಾ, ದರ್ಗಾಗಳಲ್ಲಿ ಉರುಸ್ ಮತ್ತು ಕ್ರಿಸ್‌ಮಸ್ ಆಚರಣೆಗಳಂತಹ ಕಾರ್ಯಕ್ರಮಗಳನ್ನು ರಾತ್ರಿ ವೇಳೆಯೇ ನಡೆಸಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಪೊಲೀಸರ ನಿರ್ಬಂಧಗಳು ಸಾರ್ವಜನಿಕ ಪ್ರತಿನಿಧಿಗಳಿಗೆ "ಮಾನಸಿಕ ಒತ್ತಡ" ಉಂಟುಮಾಡುತ್ತಿವೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿದರು.

Karnataka Assembly
ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು; ಕರ್ನಾಟಕಕ್ಕೆ ನಷ್ಟ: ಡಿ.ಕೆ ಶಿವಕುಮಾರ್

"ರಾತ್ರಿ 11.30 ಕ್ಕಿಂತ ಮೊದಲು ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಪೊಲೀಸರು ನಿರ್ದೇಶಿಸುತ್ತಿದ್ದಾರೆ. ಆದರೆ ಅದು ಅಸಾಧ್ಯ. ಎಲ್ಲೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಷ್ಟ. ಅಲ್ಲದೆ ಸರಿಯಾದ ಪರಿಶೀಲನೆ ಇಲ್ಲದೆ ಡೆಸಿಬಲ್ ಮಿತಿಗಳನ್ನು ಮೀರಿದ್ದಕ್ಕಾಗಿ ಧ್ವನಿವರ್ಧಕಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ" ಎಂದು ಅವರು ತಿಳಿಸಿದರು.

ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಸಚಿವ ಚೆಲುವರಾಯಸ್ವಾಮಿ, ರಾತ್ರಿ 10 ಗಂಟೆಯ ನಂತರ ಚುನಾವಣಾ ಪ್ರಚಾರ, ಸಾರ್ವಜನಿಕ ಸಭೆಗಳು, ಕಾರ್ಯಕ್ರಮಗಳು ಮತ್ತು ಧ್ವನಿವರ್ಧಕ ಬಳಕೆಯನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದರು.

ಇದರ ಹೊರತಾಗಿಯೂ, ಕೆಲವು ತಾಲ್ಲೂಕುಗಳಲ್ಲಿ, ಸ್ಥಳೀಯವಾಗಿ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಅನುಮತಿಸಲಾಗುತ್ತಿದೆ. ಅಂತಹ ಕಾರ್ಯಕ್ರಮಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾದರೆ, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದರು.

ಗೃಹ ಸಚಿವ ಜಿ ಪರಮೇಶ್ವರ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಸಮಾಲೋಚಿಸಿದ ನಂತರ, ಸಂಪ್ರದಾಯ ಮತ್ತು ಕಾನೂನಿಗೆ ಧಕ್ಕೆಯಾಗದಂತೆ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ಸರ್ಕಾರ ಖಚಿತಪಡಿಸುತ್ತದೆ ಎಂದು ಸಚಿವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com