ತುಂಗಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಸೇರಿ 7 ಪ್ರಸಿದ್ಧ ಸ್ಮಾರಕಗಳು ಮುಳುಗಡೆ

ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ.
Tourists at Tungabhadra river in Hampi where Purandaradasa Mantap was submerged due to flooding.
ತುಂಗಭದ್ರಾ ನದಿಯ ದಡದಲ್ಲಿರುವ ಪ್ರವಾಸಿಗರು.
Updated on

ಹೊಸಪೇಟೆ: ತುಂಗಭದ್ರಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ನಂತರ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಪರಿಣಾಮ 3.20 ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ.

ಈ ವರ್ಷದ ಮಳೆಗಾಲದಲ್ಲಿ ಮೂರು ಬಾರಿ ಕಂಪ್ಲಿ ಮತ್ತು ಗಂಗಾವತಿ ಸೇತುವೆ, ಪೂರ್ಣದರದಾಸ ಮಂಟಪ, ಚಕ್ರತೀರ್ಥ, ರಾಮ ಲಕ್ಷ್ಮಣ ದೇವಾಲಯ, ಹಂಪಿಯ ಕೆಲವು ಸ್ಮಾರಕಗಳು ಸೇರಿ ಏಳು ಪ್ರಸಿದ್ಧ ಸ್ಮಾರಕಗಳು ಮುಳುಗಡೆಯಾಗಿವೆ.

ತಜ್ಞರ ಸಮಿತಿಯು ಅಣೆಕಟ್ಟಿನಲ್ಲಿ 80 ಟಿಎಂಸಿಗಿಂತ ಹೆಚ್ಚು ನೀರು ಸಂಗ್ರಹಿಸಬಾರದು ಎಂದು ಸೂಚಿಸಿದ್ದು, ಅಣೆಕಟ್ಟಿನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಭದ್ರಾ ಅಣೆಕಟ್ಟು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, 21 ಕ್ರೆಸ್ಟ್ ಗೇಟ್‌ಗಳಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅದೇ ಸಮಯದಲ್ಲಿ, ತುಂಗಭದ್ರಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ, ಒಂದು ಲಕ್ಷ ಕ್ಯೂಸೆಕ್‌ಗಳಿಗೂ ಹೆಚ್ಚು ನೀರು ಬಂದಿದೆ. ಅಣೆಕಟ್ಟಿನ 21 ಕ್ರೆಸ್ಟ್ ಗೇಟ್‌ಗಳಿಂದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. 80,000 ಕ್ಯೂಸೆಕ್‌ಗಳನ್ನು ಬಿಡುಗಡೆ ಮಾಡಿದ ನಂತರ, ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದ್ದಾರೆ.

Tourists at Tungabhadra river in Hampi where Purandaradasa Mantap was submerged due to flooding.
ತುಂಗಭದ್ರಾ ಜಲಾಶಯದ 7 ಕ್ರೆಸ್ಟ್ ಗೇಟ್‌ ​ಡ್ಯಾಮೇಜ್​: ಸಚಿವರ ಹೇಳಿಕೆ ಬೆನ್ನಲ್ಲೇ ಸ್ಥಳೀಯರಲ್ಲಿ ಆತಂಕ

ಏಳು ಕ್ರೆಸ್ಟ್ ಗೇಟ್‌ಗಳು ಕಾರ್ಯನಿರ್ವಹಿಸದಿರುವ ಕುರಿತು ಎಲ್ಲಾ ಮಾಹಿತಿಯನ್ನು ಕೇಂದ್ರ ಜಲ ಮಂಡಳಿ (ಸಿಡಬ್ಲ್ಯೂಸಿ) ಮತ್ತು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮೂರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಹಂಚಿಕೊಳ್ಳಲಾಗಿದೆ. ಮುರಿದ ಕ್ರೆಸ್ಟ್ ಗೇಟ್ ಸಂಖ್ಯೆ 19 ರ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಹೊಸಪೇಟೆಯ ಸ್ಥಳೀಯ ಗಧಿಲಿಂಗಪ್ಪ ರೆಡ್ಡಿ ಎಂಬುವವರು ಮಾತನಾಡಿ, ಸಚಿವ ಶಿವರಾಜ್ ತಂಗಡಗಿ ಅಣೆಕಟ್ಟಿನ ಬಗ್ಗೆ ಸತ್ಯವನ್ನು ಬಹಿರಂಗಪಡಿಸಿದ ನಂತರ ಆತಂಕ ಹೆಚ್ಚಾಗುವಂತೆ ಮಾಡಿದೆ. ಸರ್ಕಾರ ಈ ಬಗ್ಗೆ ದೂಷಣೆ ಮಾಡುವ ಬದಲು ಸಮಸ್ಯೆಯನ್ನು ಪರಿಹರಿಸುವತ್ತ ಗಮನಹರಿಸಬೇಕು. ಹಂಪಿ ಸ್ಮಾರಕಗಳು, ಕಂಪ್ಲಿ ಮತ್ತು ಗಂಗಾವತಿ ಸೇತುವೆ ಮುಳುಗಡೆಯಾಗುತ್ತಿವೆ. ಪ್ರತಿ ವರ್ಷ ಈ ಸಮಸ್ಯೆ ಎದುರಾಗುತ್ತಲೇ ಇರುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಸ್ಮಾರಕಗಳು ಮುಳುಗಡೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಕೈಜೋಡಿಸಿದ್ದು, ಪರ್ಯಾಯ ಪರಿಹಾರಗಳಿಗಾಗಿ ಕಾರ್ಯನಿರ್ವಹಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com