
ಬೆಂಗಳೂರು: ಧರ್ಮ ಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ಆಗುತ್ತಿರುವಂತೆಯೇ ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರು ಸಭೆ ಗುರುವಾರ ಸಭೆ ನಡೆಸಿದ್ದಾರೆ.
ಅಲುಮ್ನಿ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಚಿಂತಕರಾದ ಶಿವಶಂಕರ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ನಟ ಚೇತನ್ ಅಹಿಂಸಾ ಮತ್ತಿತರರು ಭಾಗಿಯಾಗಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ದೌರ್ಜನ್ಯ, ಅತ್ಯಾಚಾರ, ಕೊಲೆ, ಭೂಕಬಳಿಕೆ, ಮೈಕ್ರೋಫೈನಾನ್ಸ್, ಹೋರಾಟಗಾರರ ಬಂಧನ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು AI ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಅಲ್ಲದೆ ಸಮೀರ್‌ನನ್ನು ವಶಕ್ಕೆ ಪಡೆಯಲು ಧರ್ಮಸ್ಥಳ ಪೊಲೀಸರು ಇಂದು ಬನ್ನೇರುಘಟ್ಟದ ನಿವಾಸಕ್ಕೆ ಆಗಮಿಸಿದ್ದರು. ಈ ಮಧ್ಯೆ, ಆಗಸ್ಟ್ 19 ರಂದು ಜಾಮೀನು ಕೋರಿ ಸಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ, ಇಂದು ಆರೋಪಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಸಮೀರ್ ಬಂಧನದಿಂದ ಪಾರಾಗಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರು ಸಭೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
Advertisement