Namma Metro: ಪ್ರಯಾಣಿಕರ ಸುರಕ್ಷತೆಗಾಗಿ RV ರೋಡ್ ಇಂಟರ್‌ಚೇಂಜ್‌ ನಿಲ್ದಾಣದಲ್ಲಿ ಸ್ಟೀಲ್ ಬ್ಯಾರಿಕೇಡ್‌ ಅಳವಡಿಕೆ

ಸುರಕ್ಷಿತ ಮತ್ತು ಪ್ರಯಾಣಿಕರ ಪರಿಣಾಮಕಾರಿ ಚಲನೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದೆ, ಪ್ರಮುಖವಾಗಿ ಭಾರೀ ಜನದಟ್ಟಣೆ ನಿರೀಕ್ಷೆ ಇರುವ ಇಂಟರ್‌ಚೇಂಜ್‌ ಮಾರ್ಗದಲ್ಲಿ ಅಳವಡಿಸಲಾಗುತ್ತಿದೆ.
steel barricades
ಉಕ್ಕಿನ ಬ್ಯಾರಿಕೇಡ್‌ ಅಳವಡಿಸಿರುವುದು.
Updated on

ಬೆಂಗಳೂರು: ನಮ್ಮ ಮೆಟ್ರೋ ಹಳಿಗಳ ಮೇಲೆ ಸಂಭವಿಸಿರುವ ಅವಘಡಗಳ ತಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮುಂದಾಗಿದ್ದು, ಇದರಂತೆ ಆರಂಭಿಕ ಹಂತವಾಗಿ ಆರ್‌ವಿ ರಸ್ತೆ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಉಕ್ಕಿನ ಬ್ಯಾರಿಕೇಡ್‌ಗಳನ್ನು ಅಳವಡಿಸಿದೆ.

ಈ ನಿಲ್ದಾಣವು ಇತ್ತೀಚೆಗೆ ಉದ್ಘಾಟನೆಗೊಂಡ ಹಳದಿ ಮಾರ್ಗವನ್ನು ಹಸಿರು ಮಾರ್ಗದೊಂದಿಗೆ ಸಂಪರ್ಕಿಸುತ್ತದೆ. ಆರ್‌ವಿ ರಸ್ತೆ ಇಂಟರ್‌ಚೇಂಜ್ ನಿಲ್ದಾಣದಲ್ಲಿ ಬ್ಯಾರಿಕೇಡ್‌ಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ ಒಂದು ಬದಿಯಲ್ಲಿ ಬ್ಯಾರಿಕೇಡ್‌ ಹಾಕುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಮತ್ತೊಂದು ಬದಿಗೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಮುಂದಿನ ಎರಡು-ಮೂರು ದಿನಗಳಲ್ಲಿ ಪೂರ್ಣಗೊಳ್ಳುತ್ತದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುರಕ್ಷಿತ ಮತ್ತು ಪ್ರಯಾಣಿಕರ ಪರಿಣಾಮಕಾರಿ ಚಲನೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದೆ, ಪ್ರಮುಖವಾಗಿ ಭಾರೀ ಜನದಟ್ಟಣೆ ನಿರೀಕ್ಷೆ ಇರುವ ಇಂಟರ್‌ಚೇಂಜ್‌ ಮಾರ್ಗದಲ್ಲಿ ಅಳವಡಿಸಲಾಗುತ್ತಿದೆ. ಹಳದಿ ಮಾರ್ಗದ ರೈಲುಗಳಿಗೆ 25 ನಿಮಿಷಗಳ ಕಾಯಬೇಕಿದೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುತ್ತದೆ. ಇದು ಜನದಟ್ಟಣೆಯ ಅಪಾಯವನ್ನು ಹೆಚ್ಚಿಸುತ್ತದೆ.

ಹೀಗಾಗಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಲ್ಲಿ ಜನರನ್ನು ನಿಯಂತ್ರಿಸಲು ಉಕ್ಕಿನ ಬ್ಯಾರಿಕೇಡ್ ಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಪ್ರಯಾಣಿಕರಿಗೆ ಸುರಕ್ಷಿತ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

steel barricades
ಬೆಂಗಳೂರು: ಮೆಟ್ರೋ ಹಳದಿ ಮಾರ್ಗ ಎಫೆಕ್ಟ್; ಹೊಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಪ್ರಮಾಣದಲ್ಲಿ ಇಳಿಕೆ

ಏತನ್ಮಧ್ಯೆ ಬಿಎಂಆರ್‌ಸಿಎಲ್'ನ ಈ ಉಪಕ್ರಮವನ್ನು ಪ್ರಯಾಣಿಕರು ಸ್ವಾಗತಿಸಿದ್ದು, ಇದು ಜನಸಂದಣಿ ನಿರ್ವಹಣೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಾಡಪ್ರಭು ಕೆಂಪೇಗೌಡ ಇಂಟರ್‌ಚೇಂಜ್ ನಂತರ ಉಕ್ಕಿನ ಬ್ಯಾರಿಕೇಡ್‌ಗಳನ್ನು ಹೊಂದಿರುವ ಎರಡನೇ ನಿಲ್ದಾಣ ಆರ್‌ವಿ ರಸ್ತೆ ನಿಲ್ದಾಣವಾಗಿದೆ. ಆರ್‌ವಿ ರಸ್ತೆಯನ್ನು ಬೊಮ್ಮಸಂದ್ರಕ್ಕೆ ಸಂಪರ್ಕಿಸುವ 19.5 ಕಿಮೀ ಹಳದಿ ಮಾರ್ಗವನ್ನು ಈ ತಿಂಗಳ ಆರಂಭದಲ್ಲಿ ಹಲವು ವಿಳಂಬಗಳ ನಂತರ ಪ್ರಾರಂಭಿಸಲಾಗಿತ್ತು.

ಈ ಹಿಂದೆ ಸಂಸದ ತೇಜಸ್ವಿ ಸೂರ್ಯ ಅವರು, 'ಹಳದಿ ಮಾರ್ಗದಲ್ಲಿ ಪ್ರತಿ 25 ನಿಮಿಷಕ್ಕೊಮ್ಮೆ ರೈಲು ಸಂಚರಿಸುತ್ತಿರುವುದು ಆರ್‌.ವಿ. ರಸ್ತೆ ಇಂಟರ್‌ಚೇಂಜ್‌ ನಿಲ್ದಾಣದಲ್ಲಿ ದಟ್ಟಣೆಗೆ ಕಾರಣವಾಗಿದೆ. ಇದರಿಂದ ಸಂಭವಿಸಬಹುದಾದ ಅಪಾಯ ತಡೆಗಟ್ಟಲು ತಕ್ಷಣವೇ ಪ್ಲಾಟ್‌ಫಾಮ್‌ರ್‍ ಸ್ಕ್ರೀನ್‌ ಡೋರ್‌ ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com