ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಆಯೋಗಕ್ಕೆ ಪತ್ರ; ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ: ಡಿಕೆಶಿ

15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ.
Dk Shivakumar
ಡಿ.ಕೆ.ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಟಿ.ಎನ್ ಜವರಾಯಿ ಗೌಡ ಅವರು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಜಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಉತ್ತರಿಸಿದರು.

“15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ. 18-08-2025ರ ವರೆಗೂ ಒಂದು ತಿಂಗಳ ಕಾಲ ಆಕ್ಷೇಪ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಸರಹಳ್ಳಿ, ಆರ್ ಆರ್ ನಗರ, ಪದ್ಮನಾಭ ನಗರ, ಮಹದೇವಪುರ, ಯಶವಂತಪುರ ಕೆಲವು ವಿಧಾನಸಭಾ ಕ್ಷೇತ್ರಗಳು ಭಾಗ ಆಗಿವೆ ನಿಜ. ಇನ್ನು ಕೆಲವು ಪ್ರದೇಶಗಳನ್ನು ಮುಂದಿನ ದಿನಗಳಲ್ಲಿ ಸೇರಿಸಬೇಕಿದೆ" ಎಂದು ತಿಳಿಸಿದರು.

"ವಾರ್ಡ್ ಗಳ ಪುನರ್ ವಿಂಗಡಣೆ 01-11-2025ಕ್ಕೆ ನಡೆಯಲಿದೆ. ಇದಕ್ಕಾಗಿ ಪಾಲಿಕೆಯಲ್ಲಿ ಆಯುಕ್ತರ ನೇತೃತ್ವದ ಪ್ರತ್ಯೇಕ ತಂಡ ಇದೆ. ನಾವು ನ್ಯಾಯಾಲಯಕ್ಕೆ ಕಾಲ ಮಿತಿಯಲ್ಲಿ ಅಫಿಡವಿಟ್ ಸಲ್ಲಿಸಿದ್ದೇವೆ. ಇನ್ನು ವಾರ್ಡ್ ಗಳ ರಚನೆ ಬಗ್ಗೆ ಪುನರ್ ವಿಂಗಡಣೆ ಬಳಿಕ ಅಧಿಸೂಚನೆ ಹೊರಡಿಸಲಾಗುವುದು" ಎಂದು ವಿವರಿಸಿದರು. ಆದಷ್ಟು ಬೇಗ ಚುನಾವಣೆ ನಡೆಸಿ ಎಂದು ಸದಸ್ಯರ ಮನವಿಗೆ ಸ್ಪಂದಿಸಿದ ಸಚಿವರು, "ಮಾನ್ಯ ಸದಸ್ಯರ ಸಲಹೆಯನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇವೆ" ಎಂದರು.

Dk Shivakumar
ತುಂಗಭದ್ರಾ ಅಣೆಕಟ್ಟು ನೂತನ ಕ್ರೆಸ್ಟ್ ಗೇಟ್ ತಯಾರಿಕೆ ಪ್ರಗತಿಯಲ್ಲಿ; ರೈತರ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com